ಮೈಸೂರು:ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಹಾಗೂ ಪತ್ನಿ ಚೆನ್ನಮ್ಮ ನಂಜನಗೂಡು ನಂಜುಂಡೇಶ್ವರನ ಸನ್ನಿಧಿಯಲ್ಲಿ ವಿಶೇಷ ಹೋಮ, ಪೂಜೆ ನೆರವೇರಿಸಿದರು.
ದೇವರ ದರ್ಶನ ಪಡೆದ ಎಚ್ ಡಿ ದೇವೇಗೌಡ ದಂಪತಿಗೆ ದೇವಸ್ಥಾನದ ಆಡಳಿತ ಮಂಡಳಿ ಮತ್ತು ಜೆಡಿಎಸ್ ಕಾರ್ಯಕರ್ತರು ಅದ್ಧೂರಿಯಾಗಿ ಸ್ವಾಗತ ಕೋರಿದರು. ನಂಜುಂಡೇಶ್ವರ ದೇವಸ್ಥಾನದಲ್ಲಿ ಹೋಮ, ಪೂಜೆಯ ನಂತರ ತುಲಾಭಾರ ನಡೆಸಿ ದೇವರಿಗೆ ಕಾಣಿಕೆ ಅರ್ಪಿಸಿದರು.