ಮೈಸೂರು:ಶಾಸಕ ಜಿ.ಟಿ. ದೇವೇಗೌಡ ಮತ್ತು ಅವರ ಪುತ್ರ ಜಿ.ಡಿ. ಹರೀಶ್ ಗೌಡರಿಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಸಾಂತ್ವನ ಹೇಳಿದ್ದಾರೆ. ಮೈಸೂರಿನ ಇಲವಾಲ ಹೋಬಳಿಯ ಗುಂಗ್ರಾಲ್ ಛತ್ರದಲ್ಲಿರುವ ಜಿ.ಟಿ.ದೇವೇಗೌಡರ ನಿವಾಸಕ್ಕೆ ಇಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಭೇಟಿ ನೀಡಿದರು.
ಜಿ.ಟಿ.ದೇವೇಗೌಡರಿಗೆ ಸಾಂತ್ವನ ಹೇಳಿದ ಎಚ್ಡಿಕೆ - ಜಿ ಟಿ ದೇವೇಗೌಡರಿಗೆ ಸಾಂತ್ವನ ಹೇಳಿದ ಎಚ್ಡಿಕೆ
ಮೈಸೂರಿನ ಇಲವಾಲ ಹೋಬಳಿಯ ಗುಂಗ್ರಾಲ್ ಛತ್ರದಲ್ಲಿರುವ ಜಿ.ಟಿ.ದೇವೇಗೌಡರ ನಿವಾಸಕ್ಕೆ ಹೆಚ್ಡಿಕೆ ಭೇಟಿ ನೀಡಿ, ಅವರಿಗೆ ಮತ್ತು ಅವರ ಮಗನಿಗೆ ಸಾಂತ್ವನ ಹೇಳಿದರು.
ಜಿ.ಟಿ.ದೇವೇಗೌಡರಿಗೆ ಸಾಂತ್ವನ ಹೇಳಿದ ಎಚ್ಡಿಕೆ
ಎಂಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಹರೀಶ್ ಗೌಡ ಅವರ ಮೂರು ವರ್ಷದ ಪುತ್ರಿ ಗೌರಿ ಸಾವಿನ ವಿಷಯ ತಿಳಿದು ಬೇಸರವಾಗಿದೆ ಎಂದು ಹೆಚ್ಡಿಕೆ ಹೇಳಿದರು. ಶಾಸಕರಾದ ಸಿ.ಎಸ್.ಪುಟ್ಟರಾಜು, ಕೆ.ಮಹದೇವ್, ಅಶ್ವಿನ್ ಕುಮಾರ್, ಜೆಡಿಎಸ್ನ ಯುವಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರ್ ಸೇರಿದಂತೆ ಮತ್ತಿತರರು ಹಾಜರಿದ್ದರು.
ಇದನ್ನೂ ಓದಿ:ವಿವಿ ನೇಮಕಾತಿ ಹಗರಣಗಳಲ್ಲಿ ಮುಖ್ಯಮಂತ್ರಿಗಳೇ ಪಾಲುದಾರರು: ಡಿ.ಕೆ.ಸುರೇಶ್ ಆರೋಪ