ಮೈಸೂರು: ಮದುವೆಯಾಗುವುದಾಗಿ ನಂಬಿಸಿ ಮಹಿಳೆಗೆ ವಂಚಿಸಿದ ಆರೋಪಿ ಹೆಡ್ ಕಾನ್ಸ್ಟೇಬಲ್ನ್ನು ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ನಂಜನಗೂಡು ತಾಲೂಕು ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸಿ.ಕೃಷ್ಣ ಬಂಧಿತ ಆರೋಪಿ.
ಮೈಸೂರು: ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ ಹೆಡ್ ಕಾನ್ಸ್ಟೇಬಲ್ ಅರೆಸ್ಟ್ - cheating case
ನಂಜನಗೂಡು ತಾಲೂಕಿನ ಹುಲ್ಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮದುವೆಯಾಗುವುದಾಗಿ ನಂಬಿಸಿ ಮಹಿಳೆಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿ ವಂಚಿಸಿದ ಹೆಡ್ ಕಾನ್ಸ್ಟೇಬಲ್ನ್ನು ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಈತ ಮಹಿಳೆಯೋರ್ವರನ್ನ ಮದುವೆಯಾಗುವುದಾಗಿ ನಂಬಿಸಿ ಆಕೆಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿದ್ದಾನೆ. ಈ ಮಧ್ಯೆ ಸೊಸೈಟಿಯಲ್ಲಿ ಮಹಿಳೆಯ ಹೆಸರಿನಲ್ಲಿ 5 ಲಕ್ಷ ರೂ. ಸಾಲ ಪಡೆದು ವಂಚಿಸಿದ್ದಾನೆ. ಅಷ್ಟೇ ಅಲ್ಲದೆ, ನ್ಯಾಯ ಕೇಳಲು ಬಂದ ಮಹಿಳೆಗೆ ಕಾನ್ಸ್ಟೇಬಲ್ ಹಾಗೂ ಆತನ ಮಗ ಹಿಗ್ಗಾಮುಗ್ಗಾ ಥಳಿಸಿ ಪರಾರಿಯಾಗಿದ್ದರು ಎಂದು ದೂರು ದಾಖಲಾಗಿತ್ತು.
ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಡ್ ಕಾನ್ಸ್ಟೇಬಲ್ ವಿರುದ್ಧ ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ಈ ಹಿನ್ನೆಲೆ ಇದೀಗ ಸರ್ಕಲ್ ಇನ್ಸ್ಪೆಕ್ಟರ್ ಲಕ್ಷ್ಮೀಕಾಂತ್ ತಳವಾರ್ ಆರೋಪಿಯನ್ನ ಬಂಧಿಸಿ, ವಿಚಾರಣೆ ನಡೆಸಿ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದ್ದಾರೆ.