ಮೈಸೂರು: ಕೇರಳದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾದ ಹಿನ್ನೆಲೆ ಮೈಸೂರು-ಕೇರಳ ಗಡಿ ಭಾಗವಾದ ಎಚ್.ಡಿ. ಕೋಟೆ ತಾಲೂಕಿನ ಬಾವಲಿ ಚೆಕ್ ಪೋಸ್ಟ್ನಲ್ಲಿ ಆರೋಗ್ಯ ಇಲಾಖೆ ಹೈ ಅಲಟ್೯ ಆಗಿ ತಪಾಸಣಾ ಕಾರ್ಯಾಚರಣೆಯನ್ನು ಚುರುಕುಗೊಳಿಸಿದೆ.
ಕೇರಳದಿಂದ ಬರುವ ವಾಹನಗಳು ಹಾಗೂ ವ್ಯಕ್ತಿಗಳನ್ನು ತಾಲೂಕು ಆರೋಗ್ಯಾಧಿಕಾರಿ ಡಾ. ರವಿಕುಮಾರ್, ತಾಲೂಕು ನೋಡಲ್ ಅಧಿಕಾರಿ ಡಾ. ಉಮೇಶ್ ನೇತೃತ್ವದಲ್ಲಿ ತಪಾಸಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ.
ಬಾವಲಿ ಚೆಕ್ ಪೋಸ್ಟ್ನಲ್ಲಿ ಆರೋಗ್ಯ ಇಲಾಖೆ ಹೈ ಅಲರ್ಟ್ ಈ ಸುದ್ದಿಯನ್ನೂ ಓದಿ:ಆರೋಗ್ಯ ಕಾರ್ಯಕರ್ತರಿಗೆ ಕೋವಿಡ್ ವ್ಯಾಕ್ಸಿನ್ ಪಡೆಯಲು ಇಂದೇ ಡೆಡ್ ಲೈನ್
ಬಾವಲಿ ಚೆಕ್‌ಪೋಸ್ಟ್‌ಗೆ ಭೇಟಿ ನೀಡಿದ್ದ ಟಿಹೆಚ್‌ಓ ಡಾ. ರವಿಕುಮಾರ್, ಚೆಕ್ ಪೋಸ್ಟ್ ಬಳಿ ಕೇರಳದಿಂದ ಬರುವ ಪ್ರಯಾಣಿಕರಿಗೆ ಥರ್ಮಲ್ ಸ್ಕ್ರೀನಿಂಗ್ ಕಡ್ಡಾಯ ಮಾಡಲಾಗಿದೆ. ಅಲ್ಲದೇ ಗಡಿಗೆ ಬರುವವರ ಮಾಹಿತಿಯನ್ನು ಆರೋಗ್ಯ ಇಲಾಖೆ ಸಿಬ್ಬಂದಿ ಸಂಗ್ರಹಿಸುತ್ತಿದ್ದಾರೆ.
ಇಂದಿನಿಂದ ಗಡಿ ಪ್ರವೇಶಿಸುವವರಿಗೆ ಕೋವಿಡ್ ರಿಪೋರ್ಟ್ ಹಾಜರುಪಡಿಸುವುದು ಕಡ್ಡಾಯವಾಗಿದೆ. ಕೋವಿಡ್ ರಿಪೋರ್ಟ್ ತೋರಿಸಿದರಷ್ಟೇ ಪ್ರವೇಶ ನೀಡಲು ಆರೋಗ್ಯ ಇಲಾಖೆ ನಿರ್ಧರಿಸಿದೆ. ಪೊಲೀಸ್ ಸಿಬ್ಬಂದಿ ಸಹಕಾರದೊಂದಿಗೆ ಜಂಟಿ ಕಾರ್ಯಚರಣೆಯನ್ನು ಆರೋಗ್ಯ ಇಲಾಖೆ ಕೈಗೊಂಡಿದೆ ಎಂದು ಮಾಹಿತಿ ನೀಡಿದರು.