ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ ವರ್ಷದ ಮೊದಲ ಮಳೆಯ ಸಿಂಚನವಾಗಿದೆ. ಇಂದು ಮಧ್ಯಾಹ್ನದ ವೇಳೆ ನಗರದ ಹಲವೆಡೆ ಭಾರೀ ಮಳೆಯಾಗಿದ್ದು, ಬಿಸಿಲಿನಿಂದ ಕಂಗೆಟ್ಟಿದ್ದ ಜನತೆ ತುಸು ನಿಟ್ಟುಸಿರು ಬಿಟ್ಟಿದ್ದಾರೆ.
ಸಾಂಸ್ಕೃತಿಕ ನಗರಿ ಮೈಸೂರಿಗೆ ವರ್ಷದ ಮೊದಲ ಭರಣಿ ಮಳೆ ಸಿಂಚನ
ಮೈಸೂರು ನಗರ ಸೇರಿದಂತೆ ಹಲವೆಡೆ ಉತ್ತಮ ಮಳೆಯಾಗಿದ್ದು, ಇಷ್ಟು ದಿನ ಬಿಸಿಲಿನಿಂದ ಕಾದ ಕೆಂಡದಂತಾಗಿದ್ದ ಭೂಮಿ ತಣ್ಣಗಾಗಿದೆ. ಅಲ್ಲದೆ ಕೃಷಿ ಚಟುವಟಿಕೆ ವೇಗ ಪಡೆಯುವ ಸೂಚನೆ ದೊರೆತಿದೆ.
ಸಾಂಸ್ಕೃತಿಕ ನಗರಿ ಮೈಸೂರಿಗೆ ವರ್ಷದ ಮೊದಲ ಭರಣಿ ಮಳೆ ಸಿಂಚನ
ಜಿಲ್ಲೆಯ ಹುಣಸೂರು, ಪಿರಿಯಾಪಟ್ಟಣ, ಹೆಚ್.ಡಿ. ಕೋಟೆ ಹಾಗೂ ನಾಗರಹೊಳೆ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯಲ್ಲಿ ಭಾರಿ ಮಳೆಯಾಗಿದೆ.
ಇತ್ತ ಲಾಕ್ಡೌನ್ ಜಾರಿಯಾಗಿರುವ ಕಾರಣ ನಗರದ ರಸ್ತೆಯಲ್ಲಿ ಜನರ ಓಡಾಟವಿಲ್ಲದೆ ಮಳೆಯಿಂದ ಯಾರೊಬ್ಬರು ಸಮಸ್ಯೆ ಎದುರಿಸಲಿಲ್ಲ. ಇನ್ನು ಗ್ರಾಮೀಣ ಭಾಗದಲ್ಲಿ ಕೃಷಿ ಚಟುವಟಿಕೆಗೆ ಈ ಮಳೆ ದಾರಿ ಮಾಡಿಕೊಡಲಿದೆ.