ಕರ್ನಾಟಕ

karnataka

ETV Bharat / state

ಮೈಸೂರಲ್ಲಿ ಭಾರಿ ಮಳೆಗೆ ಜನಜೀವನ ಅಸ್ತವ್ಯಸ್ತ.. ಯೆಲ್ಲೋ ಅಲರ್ಟ್​ ಘೋಷಣೆ - ಅಂಡಮಾನ್ ಭಾಗದಲ್ಲಿ ವಾಯುಭಾರ ಕುಸಿತ

ಮೈಸೂರು ನಗರದಾದ್ಯಂತ ಭಾರಿ ಮಳೆ ಸುರಿದ ಪರಿಣಾಮ‌ ಜನ‌ಜೀವನ ಅಸ್ತವ್ಯಸ್ತವಾಗಿದೆ. ವರುಣ ಆರ್ಭಟ ಹೆಚ್ಚಿರುವುದರಿಂದ ಯೆಲ್ಲೋ ಅಲರ್ಟ್​(Yellow Alert) ಘೋಷಿಸಲಾಗಿದೆ.

heavy rain in mysore
ಮೈಸೂರಿನಲ್ಲಿ ಭಾರಿ ಮಳೆ

By

Published : Nov 16, 2021, 6:38 PM IST

ಮೈಸೂರು: ಇಂದು ಮೈಸೂರು ನಗದಾದ್ಯಂತ ಭಾರಿ ಮಳೆ ಸುರಿದ ಪರಿಣಾಮ‌ ಜನ‌ಜೀವನ ಅಸ್ತವ್ಯಸ್ತಗೊಂಡಿದೆ. ಇಂದು ಬೆಳಗ್ಗೆಯಿಂದಲೇ ಮೋಡ ಮುಸುಕಿದ ವಾತಾವರಣವಿತ್ತು. ಮಧ್ಯಾಹ್ನ 2 ಗಂಟೆಯ ನಂತರ ಹೆಚ್ಚು ಮಳೆ ಸುರಿದಿದ್ದು, ವಾಹನ ಸವಾರರು, ಸಾರ್ವಜನಿಕರು ಪರದಾಡುವಂತಾಯಿತು.‌

ಮೈಸೂರಿನಲ್ಲಿ ಭಾರಿ ಮಳೆ

ಮಳೆಯಿಂದಾಗಿ ಈಗಾಗಲೇ ತಗ್ಗು ಪ್ರದೇಶಗಳಲ್ಲಿ ನೀರು ನುಗ್ಗಿ ಅವಾಂತರ ಸೃಷ್ಟಿಯಾದ ಬೆನ್ನಲ್ಲೇ ಇಂದು ಭಾರಿ ಮಳೆ ಸುರಿದಿರುವುದು ಮತ್ತಷ್ಟು ತೊಂದರೆಗೆ ಕಾರಣವಾಗಿದೆ. ಮತ್ತೊಮ್ಮೆ ತಗ್ಗು ಪ್ರದೇಶಗಳಿಗೆ ನೀರು ನುಗ್ಗುವ ಆತಂಕ ಎದುರಾಗಿದೆ.

ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಗೆ ಮೈಸೂರು ನಗರ ಹಾಗೂ ಜಿಲ್ಲೆಯಾದ್ಯಂತ ಹಲವಾರು ಅನಾಹುತಗಳು ನಡೆದಿದ್ದು, ತಾಲೂಕುಗಳ ವ್ಯಾಪ್ತಿಯಲ್ಲಿ ಹಲವು ಮನೆಗಳು ಕುಸಿದಿವೆ, ಬೆಳೆಗಳು ನೆಲ ಕಚ್ಚಿವೆ.

ಯೆಲ್ಲೋ ಅಲರ್ಟ್ ಘೋಷಣೆ:

ಅಂಡಮಾನ್ ಭಾಗದಲ್ಲಿ ವಾಯುಭಾರ ಕುಸಿತ ಹಾಗೂ ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಪರಿಣಾಮ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸೂಚನೆ ಇದ್ದು, ಮೈಸೂರು ಜಿಲ್ಲೆಯಲ್ಲಿಯೂ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್(Yellow Alert) ಘೋಷಿಸಿದೆ.

ABOUT THE AUTHOR

...view details