ಮೈಸೂರು: ಕೇರಳದಲ್ಲಿ ನಿಫಾ ವೈರಸ್ ಭೀತಿಯ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲೆಯ ಗಡಿ ಭಾಗದಲ್ಲಿ ಹೈ ಅಲರ್ಟ್ ಮಾಡಲಾಗಿದೆ ಎಂದು ಮೈಸೂರು ಜಿಲ್ಲಾ ಆರೋಗ್ಯ ಅಧಿಕಾರಿ ವೆಂಕಟೇಶ್ ತಿಳಿಸಿದರು. ಮೈಸೂರು ಜಿಲ್ಲೆಯ ಆರೋಗ್ಯ ಅಧಿಕಾರಿಗಳಾದ ವೆಂಕಟೇಶ್ ಈ ಟಿವಿ ಭಾರತದೊಂದಿಗೆ ಮಾತನಾಡಿ, ಮೈಸೂರು ಜಿಲ್ಲೆಯಲ್ಲಿ ಇದುವರೆಗೆ ಯಾವುದೇ ನಿಫಾ ವೈರಸ್ ಪ್ರಕರಣ ವರದಿಯಾಗಿಲ್ಲ.
ನಿಫಾ ವೈರಸ್ನಿಂದಾಗಿ ಮೈಸೂರು ಜಿಲ್ಲೆಯಲ್ಲಿ ಹೈ ಅಲರ್ಟ್ - undefined
ನಿಫಾ ವೈರಸ್ನಿಂದಾಗಿ ಮೈಸೂರು ಜಿಲ್ಲೆಯಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ ಹಾಗೂ ಕೇರಳಕ್ಕೆ ನಿಫಾ ವೈರಸ್ ಪತ್ತೆಯಾಗಿದ್ದು, ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ತಿಳಿಸಿದರು.
![ನಿಫಾ ವೈರಸ್ನಿಂದಾಗಿ ಮೈಸೂರು ಜಿಲ್ಲೆಯಲ್ಲಿ ಹೈ ಅಲರ್ಟ್](https://etvbharatimages.akamaized.net/etvbharat/prod-images/768-512-3487686-thumbnail-3x2-nifamys.jpg)
ಕೇರಳದಲ್ಲಿ ಒಬ್ಬ ವ್ಯಕ್ತಿಗೆ ಈ ವೈರಸ್ ಪಾಸಿಟಿವ್ ಇರುವುದರಿಂದ ಮುಂಜಾಗ್ರತ ಕ್ರಮವಾಗಿ ನಮ್ಮ ಗಡಿಗಳಾದ ಹೆಚ್.ಡಿ.ಕೋಟೆ, ಹುಣಸೂರು ಮತ್ತು ಪಿರಿಯಾಪಟ್ಟಣದಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದ್ದು, ವೈರಸ್ ಪತ್ತೆಗೆ ನಮ್ಮ ತಂಡ ಇಂದಿನಿಂದ ಎಲ್ಲ ಸ್ಥಳಗಳಿಗೆ ಹೋಗಿದೆ ಎಂದು ಜಿಲ್ಲಾ ಅರೋಗ್ಯಾಧಿಕಾರಿಗಳು ಹೇಳಿದರು. ನಿಫಾ ವೈರಸ್ ಯಾವ ರೀತಿ ಬರುತ್ತದೆ ಎಂಬುದನ್ನು ಸಂದರ್ಶನದಲ್ಲಿ ವಿವರಿಸಿದ್ದು, ಯಾರೂ ಸಹ ಗಾಬರಿಯಾಗುವುದು ಬೇಡ, ನಿಫಾ ವೈರಸ್ ಬಂದರೆ ನಾವು ತಿಳಿಸುತ್ತೇವೆ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಬೇಕು ಎಂದಿದ್ದಾರೆ.
ಕೇರಳ ಪ್ರವಾಸಕ್ಕೆ ಯಾರು ಸಹ ಹೋಗದಿರುವುದು ಲೇಸು ಎಂದು ಸಲಹೆ ನೀಡಿದ ಅರೋಗ್ಯಧಿಕಾರಿಗಳು. ಮೈಸೂರು ಪ್ರವಾಸಿಗರ ಕೇಂದ್ರವಾಗಿರುವುದರಿಂದ ಪ್ರವಾಸಿಗರಿಗೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವುದರ ಬಗ್ಗೆ ಜಿಲ್ಲಾ ಆರೋಗ್ಯ ಇಲಾಖೆಯಿಂದ ಈಗಾಗಲೇ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರು.