ಮೈಸೂರು: ಇನ್ನೆರಡ್ಮೂರು ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಹೈಕಮಾಂಡ್ ಹಾಗೂ ಕೇಂದ್ರ ನಾಯಕರು ತೀರ್ಮಾನ ಪ್ರಕಟಿಸಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ.
ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಹೇಳಿಕೆ ಖಾಸಗಿ ಕಾರ್ಯಕ್ರಮದ ನಿಮಿತ್ತ ಇಂದು ಮೈಸೂರಿಗೆ ಆಗಮಿಸಿದ್ದ ಬಿ.ಎಸ್ ಯಡಿಯೂರಪ್ಪ ಮಾಧ್ಯಮಗಳ ಜೊತೆ ಮಾತನಾಡಿ, ಇನ್ನೆರಡು ಮೂರು ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಕೇಂದ್ರ ನಾಯಕರು ಹಾಗೂ ಬಿಜೆಪಿ ಹೈ ಕಮಾಂಡ್ ತೀರ್ಮಾನ ಕೈಗೊಳ್ಳಲಿದೆ ಎಂದರು.
ಓದಿ:ಸಚಿವ ಸ್ಥಾನ ನಿರೀಕ್ಷೆಯಲ್ಲಿದ್ದ ರಮೇಶ್ ಜಾರಕಿಹೊಳಿಗೆ ಕಹಿಯಾಗುತ್ತಾ ಸಕ್ಕರೆ?
ಬಿಜೆಪಿ ಸರ್ಕಾರ ಭ್ರಷ್ಟ ಸರ್ಕಾರ. ದುರ್ಬಲ ಸಿಎಂ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿದ ಮಾಜಿ ಸಿಎಂ ಬಿಎಸ್ವೈ, ಇಲ್ಲಿ ಯಾರು ದುರ್ಬಲರು, ಯಾರು ಭ್ರಷ್ಟರಿದ್ದಾರೋ ಅವರ ಬಾಯಿಂದ ಅದೇ ಮಾತು ಬರುತ್ತದೆ. ಸಿದ್ದರಾಮಯ್ಯ ಆಡಳಿತ ಕಾಲದಲ್ಲಿ ಏನಾಯಿತು ಎಂಬುದು ಜಗತ್ತಿಗೆ ಗೊತ್ತು. ಪ್ರತಿಪಕ್ಷ ನಾಯಕರಾದವರು ಗೌರವದಿಂದ ನಡೆದುಕೊಳ್ಳುವುದನ್ನ ಕಲಿಯಬೇಕು ಎಂದು ತಿರುಗೇಟು ನೀಡಿದರು.
ಬಿ. ವೈ ವಿಜಯೇಂದ್ರ ಸಂಪುಟ ಸೇರ್ಪಡೆ ಬಗ್ಗೆ ನನಗೆ ಗೊತ್ತಿಲ್ಲ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬರಲು 17 ಜನ ಬಿಜೆಪಿಗೆ ಸೇರ್ಪಡೆಯಾದವರು. ಅವರು ಬಿಜೆಪಿಯಲ್ಲೇ ಮುಂದುವರಿಯುತ್ತಾರಾ ಎಂಬುದು ಸಹ ನನಗೆ ಗೊತ್ತಿಲ್ಲ ಎಂದು ಹೇಳಿದರು.