ಮೈಸೂರು: ಪಾರ್ಕ್ ಜಾಗದಲ್ಲಿ ಯಾವುದೇ ಅನುಮತಿ ಪಡೆಯದೇ ನಿರ್ಮಾಣವಾಗಿರುವ ನೂತನ ನಗರ ಪೊಲೀಸ್ ಕಮಿಷನರ್ ಕಚೇರಿಗೆ ಹೈಕೋರ್ಟ್ ನಿಂದ ತಡೆಯಾಜ್ಞೆ ಇದ್ದರೂ ಮಂಗಳವಾರ ಸಿಎಂ ಯಡಿಯೂರಪ್ಪ ಅವರಿಂದ ಉದ್ಘಾಟನೆಗೆ ದಿನಾಂಕ ನಿಗದಿಯಾಗಿದ್ದು ಸರಿಯಲ್ಲ ಎಂದು ದೂರುದಾರ ಅಶೋಕ್ ಕುಮಾರ್ ತಿಳಿಸಿದ್ದಾರೆ.
ಹೈಕೋರ್ಟ್ ತಡೆಯಾಜ್ಞೆ ಇದ್ದರೂ ಕಮಿಷನರ್ ಕಚೇರಿ ಉದ್ಘಾಟನೆಗೆ ದಿನ ನಿಗದಿ.!: ಆಕ್ಷೇಪ - city police commissioner Office inauguration by CM
ನಜರ್ಬಾದ್ನಲ್ಲಿ ನಿರ್ಮಾಣವಾಗಿರುವ ನೂತನ ಪೊಲೀಸ್ ಕಮಿಷನರ್ ಕಚೇರಿ ಪಾರ್ಕ್ ಜಾಗದಲ್ಲಿದ್ದು, ಯಾವುದೇ ಅನುಮತಿ ಪಡೆಯದೇ ನಿರ್ಮಾಣವಾಗಿದೆ ಎಂದು ಆರೋಪಿಸಿ, ನಜರ್ಬಾದ್ ನಿವಾಸಿ ಅಶೋಕ್ ಕುಮಾರ್ ಎಂಬುವವರು ಹೈಕೋರ್ಟ್ನಲ್ಲಿ ಪ್ರಶ್ನೆ ಮಾಡಿದ್ದರು.
ನಗರದ ನಜರ್ಬಾದ್ನಲ್ಲಿ ನಿರ್ಮಾಣವಾಗಿರುವ ನೂತನ ಪೊಲೀಸ್ ಕಮಿಷನರ್ ಕಚೇರಿ ಪಾರ್ಕ್ ಜಾಗದಲ್ಲಿದ್ದು, ಯಾವುದೇ ಅನುಮತಿ ಪಡೆಯದೇ ನಿರ್ಮಾಣ ಮಾಡಲಾಗಿದೆ ಎಂದು ಆರೋಪಿಸಿ, ನಜರ್ ಬಾದ್ ನಿವಾಸಿ ಅಶೋಕ್ ಕುಮಾರ್ ಹೈಕೋರ್ಟ್ನಲ್ಲಿ ಪ್ರಶ್ನೆ ಮಾಡಿದ್ದರು. ಹೈಕೋರ್ಟ್ ತಡೆಯಾಜ್ಞೆ ನೀಡಿದ್ದು, ಈ ತಡೆಯಾಜ್ಞೆಯನ್ನೂ ಲೆಕ್ಕಿಸದೆ ಪೊಲೀಸ್ ಕಮಿಷನರ್ ಕಚೇರಿ ನಿರ್ಮಾಣವಾಗಿದೆ. ಇದನ್ನು ಸಿದ್ದರಾಮಯ್ಯ ಸಿಎಂ ಆಗಿದ್ದ ಕಾಲದಲ್ಲಿ ಉದ್ಘಾಟನೆ ಮಾಡಿಸಲು ಸಿದ್ದತೆ ಮಾಡಿಕೊಂಡಿಕೊಳ್ಳಲಾಗಿತ್ತು. ಆಗ ದೂರುದಾರ ಅಶೋಕ್ ಕುಮಾರ್ ಪ್ರತಿಕಾ ಹೇಳಿಕೆ ನೀಡಿದ್ದರು. ಇದನ್ನು ಗಮನಿಸಿದ ಸಿದ್ದರಾಮಯ್ಯ ಕೋರ್ಟ್ನ ತಡೆಯಾಜ್ಞೆಯ ಉಲ್ಲಂಘನೆ ಆಗುತ್ತದೆ ಎಂದು ಉದ್ಘಾಟನೆಗೆ ಬರಲಿಲ್ಲ.
ಆದರೆ, ಮಂಗಳವಾರ 24 ನೇ ತಾರೀಖು ಸಂಜೆ ಸಿಎಂ ಯಡಿಯೂರಪ್ಪ ಈ ಕಟ್ಟಡ ಉದ್ಘಾಟನೆ ಮಾಡುತ್ತಾರೆ ಎಂದು ದಿನಾಂಕ ನಿಗದಿ ಮಾಡಲಾಗಿದೆ. ತಡೆಯಾಜ್ಞೆ ಇದ್ದರೂ ಯಡಿಯೂರಪ್ಪ ಈ ನೂತನ ಪೊಲೀಸ್ ಕಮಿಷನರ್ ಕಚೇರಿ ಉದ್ಘಾಟನೆಗೆ ಬರುತ್ತಿರುವುದು ಸರಿಯಲ್ಲ. ಇದು ನ್ಯಾಯಾಲಯದ ಆದೇಶ ಉಲ್ಲಂಘನೆ ಮಾಡಿದಂತಾಗುತ್ತದೆ ಎಂದು ಅಶೋಕ್ ಕುಮಾರ್ ಹೇಳಿದ್ದಾರೆ.
TAGGED:
high court stay news