ಮೈಸೂರು: ಹನುಮ ಜಯಂತಿ ಮೆರವಣಿಗೆ ಸಲುವಾಗಿ ಡಿಸೆಂಬರ್ 26ರಂದು ಹುಣಸೂರು ನಗರದ ಎಲ್ಲಾ ಶಾಲಾ, ಕಾಲೇಜುಗಳಿಗೆ ರಜೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಆದೇಶ ಹೊರಡಿಸಿದ್ದಾರೆ. ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಠಿಯಿಂದ ಹಾಗೂ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಕಾನೂನು ಸುವ್ಯವಸ್ಥೆ ಕಾಪಾಡಲು ಮುನ್ನೆಚ್ಚರಿಕೆ ಕ್ರಮವಾಗಿ ಸರ್ಕಾರಿ, ಅನುದಾನಿತ, ಅನುದಾನ ರಹಿತ ಹಾಗು ಖಾಸಗಿ ವಿದ್ಯಾಸಂಸ್ಥೆಗಳಿಗೆ ರಜೆ ಇರಲಿದೆ.
ಹನುಮ ಜಯಂತಿ: ನಾಳೆ ಹುಣಸೂರಿನ ಶಾಲಾ, ಕಾಲೇಜುಗಳಿಗೆ ರಜೆ - etv bharat kannada
ಡಿಸೆಂಬರ್ 26ರಂದು ಹನುಮ ಜಯಂತಿ ಆಚರಣೆ ಹಿನ್ನೆಲೆಯಲ್ಲಿ ಹುಣಸೂರು ನಗರದ ಎಲ್ಲಾ ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಹನುಮ ಜಯಂತಿ: ನಾಳೆ ಹುಣಸೂರಿನ ಶಾಲಾ-ಕಾಲೇಜುಗಳಿಗೆ ರಜೆ
Published : Dec 25, 2023, 6:41 PM IST