ಮೈಸೂರು: ಐಪಿಎಸ್ ಅಧಿಕಾರಿ ರವಿ ಡಿ ಚೆನ್ನಣ್ಣನವರ ವಿರುದ್ಧ ಕೇಳಿಬಂದಿರುವ ಅಕ್ರಮ ಆಸ್ತಿ ಸಂಪಾದನೆ ಆರೋಪದ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ ನೀಡಿದ್ದಾರೆ.
ನಗರದ ಕರ್ನಾಟಕ ಪೊಲೀಸ್ ಅಕಾಡೆಮಿಯಲ್ಲಿ 228 ಪ್ರೊಬೆಷನರಿ ಪಿಎಸ್ಐ ಗಳ ಪಥ ಸಂಚಲನದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಐಪಿಎಸ್ ಅಧಿಕಾರಿ ರವಿ ಚೆನ್ನಣ್ಣನವರ ವಿರುದ್ಧ ಕೇಳಿಬಂದ ಆರೋಪದ ದೂರಿನ ಹಿನ್ನೆಲೆಯಲ್ಲಿ ತನಿಖೆ ಶುರುವಾಗಿದೆ. ಯಾರು ಬೇಕಾದರೂ ಯಾರ ಮೇಲಾದರೂ ಆರೋಪ ಮಾಡಬಹುದು. ಆದ್ರೆ ತನಿಖೆಯಿಂದ ಸತ್ಯ ಗೊತ್ತಾಗುತ್ತದೆ ಎಂದರು.
ರವಿ ಡಿ ಚೆನ್ನಣ್ಣನವರ ವರ್ಗಾವಣೆ ಆಡಳಿತಾತ್ಮಕ ನಿರ್ಧಾರ ಅಷ್ಟೇ. ಅದು ಶಿಕ್ಷೆ ಮತ್ತು ಬೇರೇನೂ ಅಲ್ಲ. ಸಮಾಜಘಾತುಕ ಶಕ್ತಿಗಳನ್ನು ಮಟ್ಟ ಹಾಕಲು ಪೊಲೀಸ್ ಬಹಳ ಮುಖ್ಯ. ಕಾನೂನು ಪಾಲಿಸದವರ ಮನದಲ್ಲಿ ನಡುಕ ಹುಟ್ಟಿಸುವಂತಹ ಕೆಲಸವನ್ನ ಮಾಡಿ ಎಂದು ಇದೇ ವೇಳೆ ಗೃಹ ಸಚಿವರು ಇಲಾಖೆ ಸಿಬ್ಬಂದಿಗೆ ಸೂಚಿಸಿದ್ದಾರೆ.
ಇದನ್ನೂ ಓದಿ:ರವಿ ಡಿ ಚೆನ್ನಣ್ಣನವರ್ ಸೇರಿ 9 ಮಂದಿ ಐಪಿಎಸ್ ಅಧಿಕಾರಿಗಳ ವರ್ಗಾವಣೆ