ಮೈಸೂರು: ಕೊರೊನಾ ಸೋಂಕಿತ ಪೇದೆಯೊಬ್ಬರು ತಿ.ನರಸೀಪುರ ತಾಲೂಕಿನ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿದ್ದ ಹಿನ್ನೆಲೆಯಲ್ಲಿ ಆಸ್ಪತ್ರೆಯನ್ನ ಸೀಲ್ಡೌನ್ ಮಾಡಲಾಗಿದೆ.
ಕೊರೊನಾ ಸೋಂಕಿತ ಕಾನ್ಸ್ಸ್ಟೇಬಲ್ ಭೇಟಿ ನೀಡಿದ್ದ ಆಸ್ಪತ್ರೆಯೂ ಸೀಲ್ಡೌನ್! - ಪೊಲೀಸ್ ಸಿಬ್ಬಂದಿಗೆ ಕೊರೊನಾ
ತಿ.ನರಸೀಪುರ ತಾಲೂಕಿನ ಸಾರ್ವಜನಿಕ ಆಸ್ಪತ್ರೆಗೆ ಕೊರೊನಾ ಸೋಂಕಿತ ಪೇದೆಯೊಬ್ಬರು ಭೇಟಿ ನೀಡಿದ್ದ ಹಿನ್ನೆಲೆಯಲ್ಲಿ ಆಸ್ಪತ್ರೆಯನ್ನು ಸೀಲ್ಡೌನ್ ಮಾಡಲಾಗಿದೆ.

hospital
ಕೊರೊನಾ ಸೋಂಕಿತ ಭೇಟಿ ನೀಡಿದ್ದ ಆಸ್ಪತ್ರೆ ಸೀಲ್ಡೌನ್
ಚಾಮರಾಜನಗರ ಪೊಲೀಸ್ ಸಿಬ್ಬಂದಿಗೆ ಕೊರೊನಾ ದೃಢಪಟ್ಟಿದ್ದು, ಇವರ ಪತ್ನಿ ತಿ.ನರಸೀಪುರ ತಾಲೂಕಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ನರ್ಸ್ ಆಗಿ ಸೇವೆ ಸಲ್ಲಿಸುತ್ತಿದ್ದರು. ಆಸ್ಪತ್ರೆಗೆ ಭೇಟಿ ನೀಡಿದ್ದ ಪೊಲೀಸ್ ಸಿಬ್ಬಂದಿ ತನ್ನ ಪತ್ನಿಯನ್ನು ಮನೆಗೆ ಕರೆದುಕೊಂಡು ಹೋಗಿದ್ದರು.
ಸೋಂಕಿತ ಪೊಲೀಸ್ ಕಾನ್ಸ್ಟೇಬಲ್ ಭೇಟಿ ನೀಡಿದ್ದ ಸಾರ್ವಜನಿಕ ಆಸ್ಪತ್ರೆ ಕ್ವಾಟರ್ಸ್, ಮೆಡ್ ಪ್ಲಸ್, 2 ಚಪ್ಪಲಿ ಅಂಗಡಿಗಳನ್ನು ಸೀಲ್ಡೌನ್ ಮಾಡಲಾಗಿದೆ. ಹೀಗಾಗಿ ತಿ.ನರಸೀಪುರ ಜನತೆಯಲ್ಲಿ ಕೊರೊನಾ ಆತಂಕ ಮನೆ ಮಾಡಿದೆ.
Last Updated : Jun 24, 2020, 12:08 PM IST