ಮೈಸೂರು:ಶಾರ್ಟ್ ಸರ್ಕ್ಯೂಟ್‌ನಿಂದ ಮನೆಯೊಂದರಲ್ಲಿ ಬೆಂಕಿ ಅವಘಡ ಸಂಭವಿಸಿ ಮನೆಯಲ್ಲಿದ್ದ ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿರುವ ಘಟನೆ ತಾಲೂಕಿನ ಹುಯಿಲಾಳು ಗ್ರಾಮದಲ್ಲಿ ನಡೆದಿದೆ.
ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ: ಲಕ್ಷಾಂತರ ಮೌಲ್ಯದ ವಸ್ತುಗಳು ಬೆಂಕಿಗಾಹುತಿ - undefined
ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಮನೆಯೊಂದರಲ್ಲಿ ಬೆಂಕಿ ಅವಘಡ ಸಂಭವಿಸಿ ಮನೆಯಲ್ಲಿದ್ದ ಬಟ್ಟೆ, ಗೃಹೋಪಯೋಗಿ ವಸ್ತುಗಳು ಸೇರಿದಂತೆ ಚಿನ್ನಾಭರಣ, ನಗದು ಬೆಂಕಿಗಾಹುತಿಯಾಗಿರುವ ಘಟನೆ ನಡೆದಿದೆ.
ಗ್ರಾಮದ ನಿವಾಸಿ ಸಣ್ಣಶೆಟ್ಟಿ ಎಂಬುವವರ ಮನೆಯಲ್ಲಿ ಈ ಬೆಂಕಿ ಅನಾಹುತ ಸಂಭವಿಸಿದೆ. ಕುಟುಂಬದವರು ಕಾರ್ಯದ ನಿಮಿತ್ತ ಮನೆಯಿಂದ ಹೊರಗೆ ಹೋದ ವೇಳೆ ಈ ಘಟನೆ ನಡೆದಿದ್ದು, ಯಾವುದೇ ಪ್ರಾಣ ಹಾನಿಯಾಗಿಲ್ಲ.
ಶಾರ್ಟ್ ಸರ್ಕ್ಯೂಟ್‌ನಿಂದ ಮನೆಯಿಂದ ದಟ್ಟವಾದ ಹೊಗೆ ಬರಲು ಆರಂಭಿಸಿದೆ. ಕೂಡಲೇ ಸಾರ್ವಜನಿಕರು ಅಗ್ನಿಶಾಮಕ ದಳ ಸಿಬ್ಬಂದಿಗೆ ಕರೆ ಮಾಡಿದ್ದಾರೆ. ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ಒಂದು ಗಂಟೆಗೂ ಹೆಚ್ಚಿನ ಕಾಲ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸುವಲ್ಲಿ ಯಶ್ವಸಿಯಾಗಿದ್ದಾರೆ. ಈ ಅವಘಡದಲ್ಲಿ ಮನೆಯಲ್ಲಿದ್ದ ಬಟ್ಟೆ, ಗೃಹೋಪಯೋಗಿ ವಸ್ತುಗಳು ಸೇರಿದಂತೆ ಚಿನ್ನಾಭರಣ, ನಗದು ಬೆಂಕಿಗಾಹುತಿಯಾಗಿದೆ.ಈ ಸಂಬಂಧ ಇಲವಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.