ಮೈಸೂರು: ಗೃಹಿಣಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಂಜನಗೂಡು ತಾಲೂಕಿನ ಕೆಂಪಿಸಿದ್ದನಹುಂಡಿ ಗ್ರಾಮದಲ್ಲಿ ನಡೆದಿದೆ.
ನಂಜನಗೂಡಲ್ಲಿ ಗೃಹಿಣಿ ಆತ್ಮಹತ್ಯೆ: ಕಾರಣ ನಿಗೂಢ - housewife Suicide in mysore
ಗೃಹಿಣಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಂಜನಗೂಡು ತಾಲೂಕಿನ ಕೆಂಪಿಸಿದ್ದನಹುಂಡಿ ಗ್ರಾಮದಲ್ಲಿ ನಡೆದಿದೆ.
ನಂಜನಗೂಡು ತಾಲೂಕಿನಲ್ಲಿ ಗೃಹಿಣಿ ಆತ್ಮಹತ್ಯೆ
ಕೆಂಪಿಸಿದ್ದನಹುಂಡಿ ಗ್ರಾಮದ ನಿವಾಸಿ ಅನ್ನಪೂರ್ಣ (21) ಆತ್ಮಹತ್ಯೆ ಮಾಡಿಕೊಂಡ ಮೃತ ಮಹಿಳೆ. 2 ತಿಂಗಳ ಹಿಂದೆ ಕುಮಾರ್ ಎಂಬುವವರನ್ನು ಮದುವೆಯಾಗಿದ್ದರು.
ಆತ್ಮಹತ್ಯೆ ಹಿಂದಿನ ಕಾರಣ ತಿಳಿದುಬಂದಿಲ್ಲ. ಆಸ್ಪತ್ರೆಗೆ ತಾಲೂಕಿನ ತಹಶೀಲ್ದಾರರು ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಮೃತದೇಹವನ್ನು ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬದವರಿಗೆ ರವಾನಿಸಲಾಗಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ನಂಜನಗೂಡು ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.