ಮೈಸೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನ ಸೇರಿದಂತೆ ಪಕ್ಷದ ಯಾವ ಸ್ಥಾನದ ಆಕಾಂಕ್ಷಿಯೂ ಅಲ್ಲ, ನಾನೋರ್ವ ಸಾಮಾನ್ಯ ಕಾರ್ಯಕರ್ತ ಎಂದು ಮಾಜಿ ಸಚಿವ ಹೆಚ್.ಸಿ. ಮಹದೇವಪ್ಪ ಹೇಳಿದ್ದಾರೆ.
ನಾನೋರ್ವ ಕಾಂಗ್ರೆಸ್ನ ಸಾಮಾನ್ಯ ಕಾರ್ಯಕರ್ತ ಎಂದ ಮಾಜಿ ಸಚಿವ ಮಹದೇವಪ್ಪ
ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಮಾಜಿ ಸಚಿವ ಹೆಚ್.ಸಿ. ಮಹದೇವಪ್ಪ, ಪಕ್ಷ ಸಂಘಟನೆಗಾಗಿ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಜೊತೆಗೆ 4 ಕೆಪಿಸಿಸಿ ಕಾರ್ಯಧ್ಯಕ್ಷರನ್ನು ನೇಮಿಸುತ್ತಾರೆ ಎಂಬ ಬಗ್ಗೆ ಚರ್ಚೆಯಾಗುತ್ತಿದೆ. ಈ ಬಗ್ಗೆ ನನಗೆ ಗೊತ್ತಿಲ್ಲ, ನಾನೋರ್ವ ಸಾಮಾನ್ಯ ಕಾರ್ಯಕರ್ಯ ಎಂದು ಹೇಳಿದ್ದಾರೆ.
ಇಂದು ಮಾಜಿ ಮುಖ್ಯಮಂತ್ರಿ ಹಾಗೂ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಭೇಟಿಯಾದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪಕ್ಷ ಸಂಘಟನೆಗಾಗಿ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಜೊತೆಗೆ 4 ಕೆಪಿಸಿಸಿ ಕಾರ್ಯಧ್ಯಕ್ಷರನ್ನು ನೇಮಕ ಮಾಡುತ್ತಾರೆ ಎಂಬ ಬಗ್ಗೆ ಚರ್ಚೆಯಾಗುತ್ತಿದೆ. ಈ ಕುರಿತು ನನಗೆ ಗೊತ್ತಿಲ್ಲ, ಪಕ್ಷ ಸಂಘಟನೆಗೆ ಹೈಕಮಾಂಡ್ ಯಾವ ರೀತಿ ಹೋರಾಟ ನಡೆಸುತ್ತದೆ ಎಂಬ ಬಗ್ಗೆ ನಾವು ಏನನ್ನೂ ಹೇಳುವುದಿಲ್ಲ, ಎಲ್ಲವನ್ನೂ ಹೈಕಮಾಂಡ್ ತೀರ್ಮಾನ ಮಾಡುತ್ತದೆ ಎಂದರು.
ನನ್ನ ಅಭಿಪ್ರಾಯವನ್ನು ಸಹ ಹೈಕಮಾಂಡ್ ಕೇಳಿತ್ತು, ಅದನ್ನು ಅವರಿಗೆ ತಿಳಿಸಿದ್ದೇನೆ. ನಾನು ಕೆಪಿಸಿಸಿ ಅಧ್ಯಕ್ಷ ಸ್ಥಾನ ಸೇರಿದಂತೆ ಯಾವ ಸ್ಥಾನದ ಆಕಾಂಕ್ಷಿಯೂ ಅಲ್ಲ ಎಂದ ಮಾಜಿ ಸಚಿವರು, ಫ್ರೀ ಕಾಶ್ಮೀರ ಯುವತಿಯ ಪರ ವಕಾಲತ್ತು ವಹಿಸಲು ವಕೀಲರು ಹಿಂದೆ ಸರಿದಿರುವುದು ಸರಿಯಲ್ಲ. ಫಲಕ ಹಿಡಿದಿದ್ದು ತಪ್ಪೋ ಅಥವಾ ಸರಿಯೋ ಎಂಬುದು ವಿಚಾರಣೆ ನಂತರ ಗೊತ್ತಾಗಲಿದೆ ಎಂದು ತಿಳಿಸಿದರು.