ಮೈಸೂರು: ರಾಜ್ಯ ಸಚಿವ ಸಂಪುಟ ಪುನರ್ ರಚನೆಯಾದರೆ ನಾನೂ ಸಹ ಸಚಿವ ಸ್ಥಾನದ ಆಕಾಂಕ್ಷಿ ಎಂದು ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಹೇಳಿದ್ದಾರೆ.
ನಾನು ಸಹ ಸಚಿವ ಸ್ಥಾನದ ಆಕಾಂಕ್ಷಿ: ಎಚ್.ವಿಶ್ವನಾಥ್ - H.Vishwanath
ಕೊರೊನಾ ಸೋಂಕಿತರ ಸಂಖ್ಯೆ ಏರುತ್ತಿರುವುದರಿಂದ ಶಾಲೆಗಳನ್ನು ತೆರೆಯಲು ಸರ್ಕಾರ ಅನುಮತಿ ನೀಡಬಾರದು. ಖಾಸಗಿ ಸಂಸ್ಥೆಗಳಿಗೆ ಮಣಿಯದೇ ವಿದ್ಯಾರ್ಥಿಗಳ ಹಿತಕಾಯಬೇಕಿದೆ ಎಂದು ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಹೇಳಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ನನಗೆ ಸಚಿವ ಸ್ಥಾನ ನೀಡುವ ಬಗ್ಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಪಕ್ಷದ ಹೈಕಮಾಂಡ್ ತೀರ್ಮಾನ ಮಾಡುತ್ತಾರೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆಯಲ್ಲಿ ನನ್ನ ಪಾತ್ರ ಮುಖ್ಯವಾಗಿದೆ. ನನಗೆ ಸಚಿವ ಸ್ಥಾನ ಸಿಗುವ ವಿಶ್ವಾಸವಿದೆ. ರಾಷ್ಟ್ರೀಯ ಶಿಕ್ಷಣ ನೀತಿಯ ಬಗ್ಗೆ ರಾಜ್ಯದಲ್ಲಿ ಸಮಗ್ರವಾಗಿ ಚರ್ಚೆ ನಡೆಯಬೇಕಿದೆ. ಯಾವುದೇ ನಿರ್ಧಾರ ತೆಗೆದುಕೊಳ್ಳುವ ಮುನ್ನ ಶಿಕ್ಷಣ ತಜ್ಞರು ಹಾಗೂ ಪೋಷಕರ ಜೊತೆ ಚರ್ಚೆ ನಡೆಸಬೇಕು.
ದಸರಾ ಹಬ್ಬವನ್ನು ಸರಳವಾಗಿ ಆಚರಿಸುವುದಕ್ಕಿಂತ ಶಾಸ್ತ್ರೋಕ್ತವಾಗಿದ್ದರೆ ಒಳಿತು. ದಸರಾ ಹಬ್ಬಕ್ಕೆ ಸಾಕಷ್ಟು ಜನ ಬರುತ್ತಾರೆ. ಈ ಹಿನ್ನೆಲೆ ಅರಮನೆ ಅಂಗಳದಲ್ಲಿ ಧಾರ್ಮಿಕವಾಗಿ ದಸರಾ ನಡೆಯಲಿ ಎಂದರು. ಕೊರೊನಾ ನಿಯಂತ್ರಣಕ್ಕೆ ಮೇಲ್ವಿಚಾರಣೆಯನ್ನು ಜಿಲ್ಲಾಧಿಕಾರಿಗಳಿಂತ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ನೀಡಬೇಕು. ಜಿಲ್ಲಾಧಿಕಾರಿಗಳು ಸರ್ವಜ್ಞರಲ್ಲ ಎಂದು ವೈದ್ಯರ ಪರ ಬ್ಯಾಟಿಂಗ್ ಮಾಡಿದ್ದಾರೆ.