ಮೈಸೂರು: ಹೆಚ್.ವಿಶ್ವನಾಥ್ ಹೇಳಿಕೆ ಬಗ್ಗೆ ನಾನು ಮಾತನಾಡುವುದಿಲ್ಲ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.
ಮೈಸೂರಿನ ಅರಮನೆಯ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನ ಮುಂಭಾಗದಲ್ಲಿ ಕನಕ ಜಯಂತಿ ಮೆರವಣಿಗೆಗೆ ಚಾಲನೆ ನೀಡಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಿದ್ದರಾಮಯ್ಯ ಅವರು, ಹೆಚ್.ವಿಶ್ವನಾಥ್ ಅವರು ದಿವಂಗತ ದೇವರಾಜ ಅರಸು ಅವರು ನೀಡಿದ ಆಡಳಿತದಂತೆ ನರೇಂದ್ರ ಮೋದಿ ಆಡಳಿತ ನೀಡುತ್ತಿದ್ದಾರೆ ಎಂದು ನೀಡಿರುವ ಹೇಳಿಕೆಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದರು.