ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ ವೈ ವಿಜಯೇಂದ್ರ ಮೈಸೂರು: ನನಗೆ ವೈಯಕ್ತಿಕ ಅಭಿಪ್ರಾಯ ಏನೂ ಇಲ್ಲ, ನನ್ನ ಮನಸ್ಸಿನಲ್ಲೂ ಏನು ಇಲ್ಲ, ಹೈಕಮಾಂಡ್ ನಾಯಕರು ಏನು ತೀರ್ಮಾನ ಮಾಡುತ್ತಾರೋ, ಆ ತೀರ್ಮಾನಕ್ಕೆ ನಾನು ಬದ್ಧ ಎಂದು ವರುಣಾದಿಂದ ಸ್ಪರ್ಧೆ ಮಾಡುತ್ತೀರಾ ಎಂಬ ಮಾಧ್ಯಮದವರ ಪ್ರಶ್ನೆಗೆ ಬಿ ವೈ ವಿಜಯೇಂದ್ರ ಪ್ರತಿಕ್ರಿಯಿಸಿದ್ದಾರೆ.
ಇಂದು ಮೈಸೂರಿಗೆ ಖಾಸಗಿ ಕಾರ್ಯಕ್ರಮದ ನಿಮಿತ್ತ ಆಗಮಿಸಿದ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಬಿ ವೈ ವಿಜಯೇಂದ್ರ, ವರುಣಾದಿಂದ ಸ್ಪರ್ಧೆ ಮಾಡುತ್ತೀರಾ ಎಂಬ ಪ್ರಶ್ನೆಗೆ ಹೈಕಮಾಂಡ್ ಯಾವ ತೀರ್ಮಾನ ಮಾಡುತ್ತದೋ ಆ ತೀರ್ಮಾನಕ್ಕೆ ನಾನು ಬದ್ಧ. ಇದರಲ್ಲಿ ನನ್ನ ವೈಯಕ್ತಿಕ ಅಭಿಪ್ರಾಯ ಏನೂ ಇಲ್ಲ, ನನ್ನ ಮನಸ್ಸಿನಲ್ಲೂ ಏನು ಇಲ್ಲ ಎಂದು ಹೇಳಿದರು.
ನಮ್ಮ ತಂದೆ ಯಡಿಯೂರಪ್ಪನವರ ಹೇಳಿಕೆ ಬಗ್ಗೆ ನನಗೇನು ಗೊತ್ತಿಲ್ಲ. ಟಿಕೆಟ್ ವಿಚಾರವನ್ನು ಬಿ ಎಸ್ ಯಡಿಯೂರಪ್ಪ, ರಾಘವೇಂದ್ರ ಹಾಗೂ ವಿಜಯೇಂದ್ರ ತೀರ್ಮಾನ ಮಾಡುವುದಿಲ್ಲ. ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಅದಕ್ಕೆ ನಾವೆಲ್ಲ ಬದ್ಧರಾಗಿದ್ದೇವೆ ಎಂದರು.
ಇದನ್ನೂ ಓದಿ :ಇಂದಿನಿಂದ ಚುನಾವಣಾ ನೀತಿ ಸಂಹಿತೆಯ ಮಾದರಿ ನೀತಿ ಸಂಹಿತೆ ಜಾರಿ: ಡಿ ಸಿ ಡಾ ಸೆಲ್ವಮಣಿ
ಮೊದಲು ಸ್ಪರ್ಧೆಗೆ ಅವಕಾಶ ಸಿಗಲಿ:ವರುಣಾ ಕ್ಷೇತ್ರದಲ್ಲಿ ನಿಲ್ಲಬೇಕೋ ಅಥವಾ ಶಿಕಾರಿಪುರದಲ್ಲಿ ನಿಲ್ಲಬೇಕೋ ಎಂಬುದನ್ನು ಪಕ್ಷದ ಹಿರಿಯರು ತೀರ್ಮಾನ ಮಾಡಲಿ. ಅದಕ್ಕಿಂತ ಮೊದಲು ನನಗೆ ಚುನಾವಣೆಯಲ್ಲಿ ಸ್ಪರ್ಧೆ ಮಾಡಲು ಅವಕಾಶ ಸಿಗಲಿ. ಆನಂತರ ನಾನು ಎಲ್ಲಿ ಸ್ಪರ್ಧೆ ಮಾಡಬೇಕು ಎಂಬುದನ್ನು ವೈಯಕ್ತಿಕವಾಗಿ ತೀರ್ಮಾನ ಮಾಡಲು ಆಗುವುದಿಲ್ಲ. ಮೊದಲು ರಾಜ್ಯ ಮಟ್ಟದಲ್ಲಿ ತೀರ್ಮಾನ ಆಗಬೇಕು. ಆನಂತರ ಕೇಂದ್ರ ಮಟ್ಟದಲ್ಲಿ ತೀರ್ಮಾನ ಆಗಬೇಕು ಎಂದು ಹೇಳಿದರು. ನಂತರ ಮುಂದುವರಿದು ಮಾತನಾಡಿದ ಅವರು, ವರುಣಾದಿಂದ ಸ್ಪರ್ಧೆ ಮಾಡಬೇಕು ಎಂಬುದು ಕಾರ್ಯಕರ್ತರ ಒತ್ತಡ. ಈ ಎಲ್ಲಾ ಬೆಳವಣಿಗೆಗಳನ್ನು ಗಮನಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಬಿ ವೈ ವಿಜಯೇಂದ್ರ ಹೇಳಿಕೆ ನೀಡಿದರು.
ಇದನ್ನೂ ಓದಿ :ವಿಜಯೇಂದ್ರ ಎರಡು ಕ್ಷೇತ್ರದಲ್ಲಿ ನಿಲ್ಲೋದಿಲ್ಲ : ಸಂಸದ ಬಿ ವೈ ರಾಘವೇಂದ್ರ
224 ಕ್ಷೇತ್ರದಲ್ಲೂ ಬಿಜೆಪಿ ಗೆಲ್ಲಲು ಶಕ್ತವಾಗಿದೆ: ಬಿಜೆಪಿ ವರುಣಾ ಒಂದೇ ಅಲ್ಲ, ರಾಜ್ಯದ 224 ಕ್ಷೇತ್ರಗಳಲ್ಲೂ ಗೆಲ್ಲಲು ಶಕ್ತವಾಗಿದೆ. ವರುಣಾ ಕ್ಷೇತ್ರದಲ್ಲಿ ಬಿಜೆಪಿಯ ದೊಡ್ಡ ಕಾರ್ಯಕರ್ತರ ಪಡೆಯೇ ಇದೆ. ವರುಣಾದಲ್ಲಿ ಬಿಜೆಪಿ ಗೆಲ್ಲಲು ಅವಕಾಶ ಇದೆ. ರಾಜ್ಯದ ಎಲ್ಲಾ ಭಾಗಗಳಲ್ಲೂ ಬಿಜೆಪಿ ಗೆಲ್ಲಲು ಶಕ್ತವಾಗಿದೆ ಎಂದು ಉಪ ಚುನಾವಣೆಯಲ್ಲಿ ಕೆ ಆರ್ ಪೇಟೆ ಹಾಗೂ ಶಿರಾದಲ್ಲಿ ಗೆಲುವು ಸಾಧಿಸಿದ ಉದಾಹರಣೆ ನೀಡಿ, ವರುಣಾದಲ್ಲಿ ಬಿಜೆಪಿ ಗೆಲ್ಲಲು ಶಕ್ತವಾಗಿದೆ ಎಂದು ಮೈಸೂರಿನಲ್ಲಿ ಬಿ ವೈ ವಿಜಯೇಂದ್ರ ಹೇಳಿಕೆ ನೀಡಿದರು.
ಇದನ್ನೂ ಓದಿ :ಕೆಂಪೇಗೌಡ ಪ್ರತಿಮೆ ಉದ್ಘಾಟನೆ ಕಾರ್ಯಕ್ರಮಕ್ಕೆ 30 ಕೋಟಿ ಖರ್ಚು: ಡಿ ಕೆ ಸುರೇಶ್ ಆರೋಪ