ಮೈಸೂರು: ಕಸಾಯಿಖಾನೆಗೆ ಅಕ್ರಮವಾಗಿ ಕರುಗಳನ್ನು ಸಾಗಿಸುತ್ತಿದ್ದ ವಾಹನದ ಮೇಲೆ ಪೊಲೀಸರು ದಾಳಿ ನಡೆಸಿ 20 ಕರುಗಳನ್ನು ರಕ್ಷಣೆ ಮಾಡಿರುವ ಘಟನೆ ಕೆ.ಆರ್ ನಗರ ಪಟ್ಟಣದಲ್ಲಿ ನಡೆದಿದೆ.
ಅಕ್ರಮ ಗೋ ಸಾಗಾಣೆ: ಪೊಲೀಸರಿಂದ 20 ಕರುಗಳ ರಕ್ಷಣೆ - ಕೆ.ಆರ್.ನಗರ ಪೋಲಿಸ್ ಠಾಣೆ
ಕೆ.ಆರ್ ನಗರ ಪಟ್ಟಣದಲ್ಲಿ ಅಕ್ರಮವಾಗಿ ಗೋ ಸಾಗಾಣೆ ಮಾಡುತ್ತಿದ್ದ ವಾಹನವನ್ನು ಪೊಲೀಸರು ವಶಪಡಿಸಿಕೊಂಡು 20 ಕರುಗಳನ್ನು ರಕ್ಷಿಸಿದ್ದಾರೆ.
ಅಕ್ರಮ ಗೋ ಸಾಗಾಣೆ
ಮೈಸೂರು ಜಿಲ್ಲೆಯ ಕೆ.ಆರ್.ನಗರ ಪಟ್ಟಣದ ವ್ಯಾಪ್ತಿಯ ವಿವಿಧ ಸಂತೆಗಳಿಂದ ಕಸಾಯಿಖಾನೆಗೆ 20 ಕರುಗಳನ್ನು ತುಂಬಿಕೊಂಡು ಹೋಗುತ್ತಿದ್ದ ಟೆಂಪೋ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು, ವಾಹನದ ಮೇಲೆ ದಾಳಿ ಮಾಡಿ 20 ಕರುಗಳು ಹಾಗೂ ವಾಹನವನ್ನು ವಶಪಡಿಸಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ಆರೋಪಿಗಳು ವಾಹನ ಬಿಟ್ಟು ಪರಾರಿಯಾಗಿದ್ದಾರೆ. ಈ ಸಂಬಂಧ ಕೆ.ಆರ್. ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.