ಮೈಸೂರು :ಕೇಂದ್ರದಲ್ಲಿ ಮಂತ್ರಿಸ್ಥಾನ ನಾನೇ ಬೇಡ ಎಂದಿದ್ದೇನೆ. ಈ ಹಿಂದೆ ಚುನಾವಣೆಯನ್ನೇ ಬೇಡ ಎಂದಿದ್ದವನು ನಾನು, ಇನ್ನು ಮಂತ್ರಿಪಟ್ಟ ಯಾಕೇ ನನಗೆ ಎಂದು ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಹೇಳಿದ್ದಾರೆ.
ಸುತ್ತೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹಳೆ ಮೈಸೂರು ಭಾಗಕ್ಕೆ ಈಗ ಸಾಕಾಗುವಷ್ಟು ಮಂತ್ರಿ ಸ್ಥಾನ ಇದೆ. ಸಿಎಂ ಹಳೆ ಮೈಸೂರು ಭಾಗದವರೇ.. ಈಶ್ವರಪ್ಪ, ನಾರಾಯಣಗೌಡ, ಎಸ್.ಟಿ.ಸೋಮಶೇಖರ್ ಹಳೆ ಮೈಸೂರಿನವರೇ.. ಇನ್ನೆಷ್ಟು ಜನರನ್ನ ರಾಶಿ ಹಾಕಿಕೊಳ್ತೀರಾ ಹೇಳಿ ಎಂದು ಪ್ರಶ್ನಿಸಿದರು. ಅಳಿಯ ಶಾಸಕ ಹರ್ಷವರ್ಧನ್ ಮಂತ್ರಿಸ್ಥಾನ ಬೇಡಿಕೆ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ. ಅದು ಅವರ ವೈಯುಕ್ತಿಕ ಹೇಳಿಕೆ ಎಂದರು.