ಮೈಸೂರು:ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಜುಲೈ 11ರಂದು ರಾಮನಗರದ ಬಳಿ ಬೆಂಗಳೂರು- ಮೈಸೂರು ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಲಾಗುವುದು ಎಂದು ಕನ್ನಡ ಚಳವಳಿ ವಾಟಾಳ್ ಪಕ್ಷದ ಮುಖಂಡ ವಾಟಾಳ್ ನಾಗರಾಜ್ ಹೇಳಿದರು.
ಇಂದು ಮೈಸೂರಿನ ಆರ್ ಗೇಟ್ ಬಳಿ ಪ್ರತಿಭಟನೆ ನಡೆಸಿದ ವಾಟಾಳ್ ನಾಗರಾಜ್, ಸರ್ಕಾರ ಕೂಡಲೇ ಮೇಕೆದಾಟು ಯೋಜನೆಯನ್ನು ಜಾರಿಗೊಳಿಸಬೇಕು. ಈ ನಡುವೆ ಮುಖ್ಯಮಂತ್ರಿಗಳು ತಮಿಳುನಾಡಿನ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದು ಸರಿಯಲ್ಲ. ಯಡಿಯೂರಪ್ಪ ಸರ್ಕಾರಕ್ಕೆ ತಾಕತ್ತಿದ್ದರೆ ಒಂದು ವಾರದೊಳಗೆ ಮೇಕೆದಾಟು ಯೋಜನೆಗೆ ಅಡಿಗಲ್ಲು ಹಾಕಬೇಕು ಎಂದು ರಾಜ್ಯ ಸರ್ಕಾರಕ್ಕೆ ಸವಾಲು ಹಾಕಿದರು.