ಕರ್ನಾಟಕ

karnataka

ETV Bharat / state

ಮೈಸೂರು: ಎಲೆಕ್ಟ್ರಿಕ್‌ ವಾಹನ ಚಾರ್ಜಿಂಗ್ ಕೇಂದ್ರಗಳು ಉದ್ಘಾಟನೆಗೆ ಸಿದ್ಧ - ಮೊದಲ ಹಂತದಲ್ಲಿ ಸರ್ಕಾರಿ ಕಚೇರಿಗಳಲ್ಲಿ ಚಾರ್ಜಿಂಗ್ ಕೇಂದ್ರಗಳ ಸ್ಥಾಪನೆ

ಮೈಸೂರಿನಲ್ಲಿ 155 ಎಲೆಕ್ಟ್ರಿಕಲ್ ವಾಹನಗಳ ಚಾರ್ಜಿಂಗ್ ಕೇಂದ್ರವನ್ನು ಸ್ಥಾಪಿಸಲು ನಿರ್ಧರಿಸಲಾಗಿದೆ. ಈ ನಿಟ್ಟಿನಲ್ಲಿ ಈಗಾಗಲೇ ಮೂರು ಕಡೆ ಚಾರ್ಜಿಂಗ್ ಕೇಂದ್ರಗಳನ್ನು ಸ್ಥಾಪಿಸಿದ್ದು, ಉದ್ಘಾಟನೆಗೆ ರೆಡಿಯಾಗಿವೆ.

Mysore
ಮೈಸೂರು

By

Published : May 6, 2022, 9:09 AM IST

ಮೈಸೂರು:ಪ್ರಸ್ತುತ ದಿನಮಾನಗಳಲ್ಲಿ ಎಲೆಕ್ಟ್ರಿಕ್ ವಾಹನಗಳ ಓಡಾಟ ಹೆಚ್ಚಾಗಿದೆ. ಆದರೆ ಹೊರಗಡೆ ಇದ್ದಾಗ ವಾಹನವನ್ನು ಚಾರ್ಜ್ ಮಾಡೋದು ದೊಡ್ಡ ಸಮಸ್ಯೆಯಾಗಿತ್ತು. ಇದೀಗ ಈ ಸಮಸ್ಯೆ ನಿವಾರಿಸುವ ನಿಟ್ಟಿನಲ್ಲಿ ಮೈಸೂರಿನಲ್ಲಿ ಚಾರ್ಜಿಂಗ್ ಕೇಂದ್ರ ಸ್ಥಾಪಿಸಲು ನಿರ್ಧರಿಸಲಾಗಿದೆ.

155 ಚಾರ್ಜಿಂಗ್ ಕೇಂದ್ರವನ್ನು ಸ್ಥಾಪಿಸಲು ನಿರ್ಧರಿಸಿದ್ದು, ಮೊದಲ ಹಂತದಲ್ಲಿ ಸರ್ಕಾರಿ ಕಚೇರಿಗಳಲ್ಲಿ ಚಾರ್ಜಿಂಗ್ ಕೇಂದ್ರಗಳ ಸ್ಥಾಪನೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಈಗಾಗಲೇ ಮೈಸೂರಿನಲ್ಲಿ ಮೂರು ಕಡೆ ಚಾರ್ಜಿಂಗ್ ಕೇಂದ್ರಗಳನ್ನು ಸ್ಥಾಪಿಸಿದ್ದು, ಉದ್ಘಾಟನೆಗೆ ಸಜ್ಜಾಗಿವೆ. ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಖಾಸಗಿಯವರಿಗೆ ಕಾಮಗಾರಿ ನೀಡಲು ಚಿಂತನೆ ನಡೆದಿದೆ.

ವಾಹನ ಚಾರ್ಜ್ ಮಾಡಿಕೊಳ್ಳಲು ಗ್ರಾಹಕರು ಪವರ್ ಇವಿ ಆ್ಯಪ್​​ ಬಳಸಬಹುದಾಗಿದೆ. ಸೆಸ್ಕ್ ವ್ಯಾಪ್ತಿಯಲ್ಲಿ ಚಾರ್ಜಿಂಗ್ ಕೇಂದ್ರಗಳ ಮಾಹಿತಿ, ಕರೆಂಟ್ ಚಾರ್ಜ್ ಹಾಗೂ ಬಾಡಿಗೆ ಮಾದರಿ ಚಾರ್ಜಿಂಗ್ ಕೇಂದ್ರಗಳ ಕುರಿತಾದ ಮಾಹಿತಿಯನ್ನು ಸಹ ಈ ಆ್ಯಪ್​​ ಮೂಲಕ ಪಡೆಯಬಹುದು. ಮೇ 7ರಂದು ಮೈಸೂರು-ಊಟಿ ರಸ್ತೆಯಲ್ಲಿರುವ ಕಡಕೊಳದ ಕೆಇಬಿಇಎ ತರಬೇತಿ ಕೇಂದ್ರದಲ್ಲಿ ಎಲೆಕ್ಟ್ರಿಕಲ್ ವಾಹನಗಳ ಇ-ಚಾರ್ಚಿಂಗ್ ತಂತ್ರಜ್ಞಾ ಕುರಿತ ವಿಚಾರ ಸಂಕಿರಣ ಹಮ್ಮಿಕೊಳ್ಳಲಾಗಿದೆ.

ಇದನ್ನೂ ಓದಿ:ಕೌಟುಂಬಿಕ ಕಿರುಕುಳ: ಪತ್ನಿ ಜೀವನಾಂಶಕ್ಕೆ ಅರ್ಹಳು- ಹೈಕೋರ್ಟ್

ರಾಜ್ಯದಲ್ಲಿ ಮೊದಲ ಬಾರಿಗೆ ಎಲೆಕ್ಟ್ರಾನಿಕ್ ವಾಹನಗಳ ಕುರಿತಾಗಿ ವಿಚಾರ ಸಂಕಿರಣವನ್ನು ಆಯೋಜಿಸಲಾಗಿದೆ. ಈ ವಿಚಾರ ಸಂಕಿರಣದಲ್ಲಿ ಕ್ರೆಡಲ್, ಕೆಪಿಸಿಟಿಎಲ್, ರಾಜ್ಯದ ಎಲ್ಲಾ ವಿದ್ಯುತ್ ನಿಗಮಗಳು ಮತ್ತು ರಾಜ್ಯ ಹಾಗೂ ಅಂತರರಾಜ್ಯಗಳ ವಿದ್ಯುತ್ ಚಾಲಿತ ವಾಹನಗಳ ಉತ್ಪಾದಕರು ಸಹ ಭಾಗವಹಿಸಲಿದ್ದಾರೆ ಎಂದು ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ನಿರ್ದೇಶಕ ಜಯವಿಭವ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

For All Latest Updates

TAGGED:

ABOUT THE AUTHOR

...view details