ಕರ್ನಾಟಕ

karnataka

ETV Bharat / state

ಕೋವಿಡ್-19 ಪರೀಕ್ಷೆ ಪ್ರಮಾಣ ಹೆಚ್ಚಿಸಿ.. ಉಸ್ತುವಾರಿ ಕಾರ್ಯದರ್ಶಿ ಎನ್ ಜಯರಾಮ್ - ಅಭಿವೃದ್ಧಿ ಕಾರ್ಯಕ್ರಮ ಮತ್ತು ಪ್ರಗತಿ ಪರಿಶೀಲನೆ

ಕೋವಿಡ್ ಆಸ್ಪತ್ರೆಗಳಲ್ಲಿ ಗ್ರೂಪ್ ಡಿ ನೌಕರರ ಹುದ್ದೆ ಖಾಲಿ ಇವೆ. ಆಸ್ಪತ್ರೆಯ ಕೆಲಸ ಕುಂಠಿತವಾಗಲಿದೆ ಎಂಬ ಮಾಹಿತಿ ಬಂದಿದೆ. ಕೂಡಲೇ ಹೊರಗುತ್ತಿಗೆ ಆಧಾರದಲ್ಲಿ ಅನುಭವವುಳ್ಳ ಸಿಬ್ಬಂದಿ ನೇಮಕ ಮಾಡಿಕೊಳ್ಳಿ ಎಂದು ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು..

ಅಧಿಕಾರಿಗಳ ಸಭೆ
ಅಧಿಕಾರಿಗಳ ಸಭೆ

By

Published : Sep 23, 2020, 9:45 PM IST

ಮೈಸೂರು :ಜಿಲ್ಲೆಯಲ್ಲಿ ಕೋವಿಡ್-19 ಪರೀಕ್ಷೆ ಪ್ರಮಾಣ ಹೆಚ್ಚಿಸುವಂತೆ ಮೈಸೂರು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎನ್ ಜಯರಾಮ್ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ವಿವಿಧ ಇಲಾಖೆ ಹಾಗೂ ನಿಗಮ ಮಂಡಳಿಗಳ ಅಭಿವೃದ್ಧಿ ಕಾರ್ಯಕ್ರಮ ಮತ್ತು ಪ್ರಗತಿ ಪರಿಶೀಲನೆ ಕುರಿತು ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಕೋವಿಡ್-19 ಪರೀಕ್ಷೆಯನ್ನು ಹೆಚ್ಚು ಪ್ರಮಾಣದಲ್ಲಿ ಕೈಗೊಂಡ್ರೆ ಸೋಂಕಿತರಿಗೆ ಸಕಾಲಕ್ಕೆ ಚಿಕಿತ್ಸೆ ನೀಡಲು ಅನುಕೂಲವಾಗುತ್ತೆ. ಅಲ್ಲದೇ, ಸೋಂಕು ಹರಡುವುದನ್ನು ಕೂಡ ನಿಯಂತ್ರಿಸಬಹುದು. ಹಾಗಾಗಿ, ಪರೀಕ್ಷೆಯ ಪ್ರಮಾಣ ಹೆಚ್ಚಿಸಲು ಕೂಡಲೇ ಕ್ರಮಕೈಗೊಳ್ಳಬೇಕು ಎಂದರು.

ಕೋವಿಡ್ ಆಸ್ಪತ್ರೆಗಳಲ್ಲಿ ಗ್ರೂಪ್ ಡಿ ನೌಕರರ ಹುದ್ದೆ ಖಾಲಿ ಇವೆ. ಆಸ್ಪತ್ರೆಯ ಕೆಲಸ ಕುಂಠಿತವಾಗಲಿದೆ ಎಂಬ ಮಾಹಿತಿ ಬಂದಿದೆ. ಕೂಡಲೇ ಹೊರಗುತ್ತಿಗೆ ಆಧಾರದಲ್ಲಿ ಅನುಭವವುಳ್ಳ ಸಿಬ್ಬಂದಿ ನೇಮಕ ಮಾಡಿಕೊಳ್ಳಿ ಎಂದು ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು. ಪ್ರವಾಹದಿಂದಾಗಿ ಹಾನಿಗೊಳಗಾದ ಸಂತ್ರಸ್ತರಿಗೆ ಪರಿಹಾರ ಒದಗಿಸಿಲು ಕ್ರಮಕೈಗೊಳ್ಳಿ. ಬೆಳೆ ಹಾನಿಗೊಳಗಾದ ರೈತರಿಗೆ ಇಲಾಖೆಯಿಂದ ನೀಡುವ ಪರಿಹಾರವನ್ನು ತ್ವರಿತಗತಿಯಲ್ಲಿ ಒದಗಿಸುವಂತೆ ಸೂಚಿಸಿದರು.

ಕೃಷಿ ಇಲಾಖೆಯಿಂದ ನೀಡುವ ಕೃಷಿ ಯಂತ್ರೋಪಕರಣಗಳ ಖರೀದಿಗೆ ಸಹಾಯಧನ ಹಾಗೂ ಇನ್ನಿತರ ಸಾಲ ಸೌಲಭ್ಯವನ್ನು ಎಲ್ಲಾ ಅರ್ಹ ಫಲಾನುಭವಿ ರೈತರಿಗೆ ತಲುಪುವಂತೆ ಪಾರದರ್ಶಕವಾಗಿ ಕ್ರಮಕೈಗೊಂಡು ಸರ್ಕಾರದ ಯೋಜನೆಗಳು ಫಲಪ್ರದವಾಗುವಂತೆ ಕೆಲಸ ನಿರ್ವಹಿಸಿ ಎಂದರು.

ಲಾಕ್‍ಡೌನ್ ಸಮಯದಲ್ಲಿ ಜಿಲ್ಲೆಯಲ್ಲಿ ಹೆಚ್ಚು ಬಾಲ್ಯವಿವಾಹ ಪ್ರಕರಣ ವರದಿಯಾಗಿವೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂಗನವಾಡಿ ಕಾರ್ಯಕರ್ತೆಯರು, ಸ್ಥಳೀಯ ಗ್ರಾಮ ಪಂಚಾಯತ್ ಸದಸ್ಯರಿಂದ ಮಾಹಿತಿ ಪಡೆದು ವಿವಾಹ ದಿನದಂದೇ ಬಾಲ್ಯವಿವಾಹ ತಡೆಯುವ ಬದಲು ವಿವಾಹ ತಯಾರಿ ದಿನಗಳಲ್ಲೇ ತಡೆಯಲು ಮುಂದಾಗಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.

ABOUT THE AUTHOR

...view details