ಮೈಸೂರು: ಜಿಲ್ಲೆಯಲ್ಲಿ ಕೋವಿಡ್ ಆರ್ಭಟ ಮುಂದುವೆರೆದಿದ್ದು ಇಂದು 11 ಜನ ಕೊರೊನಾದಿಂದ ಮೃತಪಟ್ಟರೆ, 667 ಮಂದಿಯಲ್ಲಿ ಸೋಂಕು ಹರಡಿರುವುದು ದೃಢಪಟ್ಟಿದೆ. ದಿನದಿಂದ ದಿನಕ್ಕೆ ಸೋಂಕಿತ ಸಂಖ್ಯೆ ಜೊತೆ ಸಾವಿನ ಸಂಖ್ಯೆ ಸಹ ಹೆಚ್ಚಾಗುತ್ತಿರುವುದರಿಂದ ಆತಂಕದ ಮನೆ ಮಾಡಿದೆ.
11 ಜನರನ್ನು ಬಲಿ ಪಡೆದ ಕೊರೊನಾ: ಮೈಸೂರು ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಸೋಂಕಿತರ ಸಂಖ್ಯೆ - Corona case
ಮೈಸೂರು ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಸೋಂಕಿತ ಸಂಖ್ಯೆಯ ಜೊತೆ ಸಾವಿನ ಸಂಖ್ಯೆ ಸಹ ಹೆಚ್ಚಾಗುತ್ತಿರುವುದರಿಂದ ಆತಂಕದ ಮನೆ ಮಾಡಿದೆ. ಇಂದು 11 ಜನ ಕೊರೊನಾದಿಂದ ಮೃತಪಟ್ಟಿದ್ದಾರೆ.

ಮೈಸೂರು ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಸೋಂಕಿತ ಸಂಖ್ಯೆ
ಗುಣ ಹೊಂದಿದ 161 ಜನ ವಿವಿಧ ಆಸ್ಪತ್ರೆಗಳಿಂದ ಇಂದು ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟಾರೆ 19,353 ಕೊರೊನಾ ಪ್ರಕರಣಗಳ ಪೈಕಿ, ಸಂಪೂರ್ಣವಾಗಿ ಗುಣಮುಖರಾದ 13,092 ಮಂದಿ ಡಿಸ್ಚಾರ್ಜ್ ಆಗಿದ್ದು, 5794 ಮಂದಿ ಕೊರೊನಾಗೆ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇಲ್ಲಿಯವರೆಗೆ 467 ಮಂದಿ ಕೋವಿಡ್-19ಗೆ ಮೃತಪಟ್ಟಿದ್ದಾರೆ. ಕಳೆದ ಮೂರು ದಿನಗಳಿಂದ ಸೋಂಕಿತರ ಸಂಖ್ಯೆಯಲ್ಲಿ ಹೆಚ್ಚಾಗುತ್ತಿದ್ದರೆ ಡಿಸ್ಚಾರ್ಜ್ ಆಗುವವರ ಸಂಖ್ಯೆ ಇಳಿಮುಖವಾಗುತ್ತಿದೆ. ಸಾವಿನ ಸರಣಿ ಮುಂದುವರಿಯುತ್ತಿದೆ.