ಮೈಸೂರು: ಪ್ರಚಾರದ ವೇಳೆ ಲಘು ಹೃದಯಘಾತವಾಗಿ ಪಕ್ಷೇತರ ಅಭ್ಯರ್ಥಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಹುಣಸೂರು ಉಪ ಚುನಾವಣೆಯಲ್ಲಿ ನಿನ್ನೆ (ನ.28) ಸಂಜೆ ನಡೆದಿದೆ.
ಹುಣಸೂರು ಅಖಾಡ: ಪ್ರಚಾರದ ವೇಳೆ ಪಕ್ಷೇತರ ಅಭ್ಯರ್ಥಿಗೆ ಲಘು ಹೃದಾಯಾಘಾತ - independent candidate during the campaign Heart attack in hunasuru
ಮೈಸೂರು ಜಿಲ್ಲೆ ಹುಣಸೂರು ಉಪಚುನವಣೆಯಲ್ಲಿ ಪ್ರಚಾರದ ವೇಳೆ ಪಕ್ಷೇತರ ಅಭ್ಯರ್ಥಿ ಉಮೇಶ್ ಎಂಬುವವರಿಗೆ ಲಘು ಹೃದಯಾಘಾತವಾಗಿದೆ. ತಕ್ಷಣ ಅವರನ್ನ ಮೈಸೂರು ಜಯದೇವ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಪಕ್ಷೇತರ ಅಭ್ಯರ್ಥಿ ಉಮೇಶ್
ಹುಣಸೂರು ಉಪಚುನಾವಣಾ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಈ ನಡುವೆ ಕಣದಲ್ಲಿರುವ ಪಕ್ಷೇತರ ಅಭ್ಯರ್ಥಿ ಉಮೇಶ್ ನಿನ್ನೆ ಸಂಜೆ ಪ್ರಚಾರ ಮಾಡುತ್ತಿದ್ದ ವೇಳೆ ಲಘು ಹೃದಯಘಾತಕ್ಕೆ ಒಳಗಾಗಿದ್ದಾರೆ. ತಕ್ಷಣ ಅವರನ್ನು ಮೈಸೂರಿನ ಜಯದೇವ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸದ್ಯಕ್ಕೆ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.