ಕರ್ನಾಟಕ

karnataka

By

Published : Jan 5, 2021, 8:14 PM IST

Updated : Jan 5, 2021, 10:45 PM IST

ETV Bharat / state

ಹಕ್ಕಿಜ್ವರ ಎಫೆಕ್ಟ್: ಬಾವಲಿ ಚೆಕ್ ಪೋಸ್ಟ್​​​ನಲ್ಲಿ ಕೇರಳ ವಾಹನಗಳ ತಪಾಸಣೆ

ಜೀವಂತ ಕೋಳಿ/ ಮಾಂಸ ಮಾರಾಟ ಕೇಂದ್ರಗಳು ಮತ್ತು ಕೋಳಿ ಸಾಗಾಣಿಕೆ ವಾಹನಗಳ ಚಲನವಲನದ ಬಗ್ಗೆ ನಿಗಾ ವಹಿಸಲು ಹಾಗೂ ಸಂದರ್ಭಾನುಸಾರ ಸೂಕ್ತ ಕ್ರಮ ವಹಿಸಿ ಮಾಹಿತಿ ನೀಡಲು ತಾಲೂಕುಮಟ್ಟದ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Inspection of Kerala Vehicles at Bawali Check Post
ಬಾವಾಲಿ ಚೆಕ್ ಪೋಸ್ಟ್ ನಲ್ಲಿ ಕೇರಳ ವಾಹನಗಳ ತಪಾಸಣೆ.

ಮೈಸೂರು: ಕೇರಳ ರಾಜ್ಯದಲ್ಲಿ ಹಕ್ಕಿಜ್ವರ ಕಾಣಿಸಿಕೊಂಡಿರುವ ಹಿನ್ನೆಲೆ ಗಡಿ ಭಾಗದಲ್ಲಿ ಬರುವ ಹೆಚ್.ಡಿ.ಕೋಟೆ ತಾಲೂಕಿನ ಬಾವಲಿ ಚೆಕ್‌ ಪೋಸ್ಟ್‌ನಿಂದ ಕೋಳಿ ಮತ್ತು ಇತರೆ ಪಕ್ಷಿಗಳ ಸಾಗಾಣಿಕೆಯನ್ನು ನಿರ್ಬಂಧಿಸಲಾಗಿದೆ.

ಬಾವಾಲಿ ಚೆಕ್ ಪೋಸ್ಟ್​​ನಲ್ಲಿ ಕೇರಳ ವಾಹನಗಳ ತಪಾಸಣೆ

ಕೇರಳದಿಂದ ಬಾವಲಿ ಚೆಕ್ ಪೋಸ್ಟ್ ಮೂಲಕ ಬರುವ ವಾಹನಗಳನ್ನು ಸ್ಯಾನಿಟೈಸ್​​ ಮಾಡಲು ಕ್ರಮ ಕೈಗೊಳ್ಳಲಾಗಿದ್ದು, ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಕಟ್ಟೆಚ್ಚರ ವಹಿಸಿದ್ದಾರೆ.

ಓದಿ: ಭಾರತದಲ್ಲಿ ಮತ್ತೆ ಹಕ್ಕಿ ಜ್ವರ: ಇದು ಹೇಗೆ ಹರಡುತ್ತದೆ, ಮುಂಜಾಗ್ರತಾ ಕ್ರಮಗಳೇನು?

ಕೋಳಿಗಳು, ಹಿತ್ತಲ ಕೋಳಿಗಳು, ಹಕ್ಕಿಗಳು, ಕಾಡು ಹಕ್ಕಿಗಳು, ವಲಸೆ ಹಕ್ಕಿಗಳು ಯಾವುದೇ ಹಕ್ಕಿಗಳಲ್ಲಿ ಅಸ್ವಾಭಾವಿಕ ರೋಗ ಲಕ್ಷಣಗಳು ಕಂಡುಬಂದಲ್ಲಿ ಅಥವಾ ಅಸ್ವಾಭಾವಿಕ ಮರಣ ಸಂಭವಿಸಿದಲ್ಲಿ ಕೂಡಲೇ ಪಾಶುಪಾಲನಾ ಇಲಾಖಾ ಅಧಿಕಾರಿಗಳಿಗೆ ಮಾಹಿತಿ ನೀಡಬೇಕು. ಅಧಿಕಾರಿಗಳು ತೀವ್ರ ನಿಗಾ ವಹಿಸಿ ಹಕ್ಕಿಜ್ವರ ಸಂಭವನೀಯತೆಯನ್ನು ಪರಿಗಣಿಸಿ ಸಂಬಂಧಪಟ್ಟ ಪ್ರಯೋಗಾಲಯಕ್ಕೆ ರೋಗ ವಿಶ್ಲೇಷಣೆ ನಡೆಸುವ ಬಗ್ಗೆ ಕ್ರಮ ವಹಿಸಲು ಇಲಾಖೆಯ ಅಧಿಕಾರಿಗಳಿಗೆ ತಿಳಿಸಲಾಗಿದೆ.

ಜೀವಂತ ಕೋಳಿ/ ಮಾಂಸ ಮಾರಾಟ ಕೇಂದ್ರಗಳು ಮತ್ತು ಕೋಳಿ ಸಾಗಾಣಿಕೆ ವಾಹನಗಳ ಚಲನವಲನದ ಬಗ್ಗೆ ನಿಗಾ ವಹಿಸಲು ಹಾಗೂ ಸಂದರ್ಭಾನುಸಾರ ಸೂಕ್ತ ಕ್ರಮ ವಹಿಸಿ ಮಾಹಿತಿ ನೀಡಲು ತಾಲೂಕುಮಟ್ಟದ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Last Updated : Jan 5, 2021, 10:45 PM IST

ABOUT THE AUTHOR

...view details