ಮೈಸೂರು: ದಲಿತ ಪರ ಸಂಘಟನೆಗಳು ಹಾಗೂ ಹಿಂದುಳಿದ ವರ್ಗಗಳ ಸಂಘಟನೆಗಳು ಮತ್ತು ವಿವಿಧ ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಮೈಸೂರು ಬಂದ್ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಇಂದು ಬೆಳಗ್ಗೆಯಿಂದಲೇ ಸಂಘಟನೆಗಳು ಗ್ರಾಮಾಂತರ ಬಸ್ ನಿಲ್ದಾಣ, ಎಂ.ಜಿ. ರಸ್ತೆಯಲ್ಲಿರುವ ತರಕಾರಿ ಮಾರುಕಟ್ಟೆ ಹಾಗೂ ನಗರದ ಪ್ರಮುಖ ರಸ್ತೆಗಳಿಗೆ ತೆರಳಿ ಅಂಗಡಿ ಮುಂಗಟ್ಟುಗಳನ್ನು ಮುಚ್ಚುವಂತೆ ಒತ್ತಾಯ ಮಾಡಿದರು.
ಎಂಜಿ ರಸ್ತೆಯಲ್ಲಿರುವ ತರಕಾರಿ ಮಾರುಕಟ್ಟೆಗೆ ತೆರಳಿ, ತರಕಾರಿ ಅಂಗಡಿಗಳನ್ನು ಕೂಡ ಮುಚ್ಚಿಸಿದ ಅವರು ಗ್ರಾಮಾಂತರ ಬಸ್ ನಿಲ್ದಾಣದಲ್ಲಿ ಬಸ್ ಸಂಚಾರಕ್ಕೆ ಅವಕಾಶ ನೀಡದೆ ಪ್ರತಿಭಟನೆ ನಡೆಸಿದರು.
ಮೈಸೂರು ಬಂದ್ಗೆ ನೀರಸ ಪ್ರತಿಕ್ರಿಯೆ ರಾಯಚೂರಿನಲ್ಲಿ ಜ.26ರಂದು ನ್ಯಾ.ಮಲ್ಲಿಕಾರ್ಜುನ ಗೌಡ ಅವರು ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರ ತೆಗೆಸಿ ಅಪಮಾನ ಮಾಡಿದ ಹಿನ್ನೆಲೆ ಅವರನ್ನು ಗಡಿಪಾರು ಮಾಡಿ ಕಠಿಣ ಶಿಕ್ಷೆ ವಿಧಿಸುವಂತೆ ಮೈಸೂರು ಬಂದ್ಗೆ ವಿವಿಧ ಸಂಘಟನೆಗಳು ಕರೆ ಕೊಟ್ಟಿವೆ.