ಕರ್ನಾಟಕ

karnataka

ETV Bharat / state

ನಾಟಕಯೊಂದರಲ್ಲಿ ಸಿದ್ದರಾಮಯ್ಯ ಡಿಕೆಶಿಗೆ ಅವಮಾನ: ದೂರು ದಾಖಲು.. - ದೂರು ದಾಖಲು

ರಂಗಾಯಣದ ನಾಟಕದಲ್ಲಿ ಸಿದ್ದರಾಮಯ್ಯ-ಡಿಕೆಶಿಗೆ ಅವಮಾನ.. ಮೈಸೂರಿನಲ್ಲಿ ನಾಟಕದ ನಿರ್ದೇಶಕನ ವಿರುದ್ಧ ದೂರು.. ಸಿದ್ದರಾಮಯ್ಯ ಅಭಿಮಾನಿಗಳಿಂದ ಪೊಲೀಸ್​ ಠಾಣೆಯಲ್ಲಿ ದೂರು ದಾಖಲು..

Insulting to Siddaramaiah in the drama  Former cm Siddaramaiah news  Complete against Drama artist  ಕಂಬಾರರ ನಾಟಕದಲ್ಲಿ ಸಿದ್ದರಾಮಯ್ಯ ಡಿಕೆಶಿಗೆ ಅವಮಾನ  ಮೈಸೂರಿನಲ್ಲಿ ನಾಟಕದ ನಿರ್ದೇಶಕನ ವಿರುದ್ಧ ದೂರು  ರಂಗಾಯಣದಲ್ಲಿ ನಡೆದ ನಾಟಕ ಪ್ರದರ್ಶನ  ಚಂದ್ರಶೇಖರ ಕಂಬಾರರ ಸಾಂಬಶಿವ ಪ್ರಹಸನ ನಾಟಕ
ಕಂಬಾರರ ನಾಟಕದಲ್ಲಿ ಸಿದ್ದರಾಮಯ್ಯ-ಡಿಕೆಶಿಗೆ ಅವಮಾನ, ದೂರು ದಾಖಲು..

By

Published : Jan 2, 2023, 1:29 PM IST

ಮೈಸೂರು:ರಂಗಾಯಣದಲ್ಲಿ ನಡೆದ ನಾಟಕ ಪ್ರದರ್ಶನದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರರ್ ವಿರುದ್ಧ ಅವಹೇಳನಕಾರಿಯಾಗಿ ಬಿಂಬಿಸಲಾಗಿದೆ ಎಂದು ಆರೋಪಿಸಿ ಕರ್ನಾಟಕ ಪ್ರದೇಶ ಕುರುಬರ ಸಂಘದ ಅಧ್ಯಕ್ಷ ಬಿ ಸುಬ್ರಹ್ಮಣ್ಯ ಪೊಲೀಸರಿಗೆ ದೂರು ನೀಡಿದ್ದಾರೆ.

ಶನಿವಾರ ಸಂಜೆ ರಂಗಾಯಣದ ಭೂಮಿ ಗೀತದಲ್ಲಿ ಚಂದ್ರಶೇಖರ ಕಂಬಾರರ ‘ಸಾಂಬಶಿವ ಪ್ರಹಸನ’ ನಾಟಕವನ್ನು ಕಾರ್ತಿಕ್ ಉಪಮನ್ಯು ನಿರ್ದೇಶನದಲ್ಲಿ ಸಂಸ್ಥೆಯ ‘ನಾಗರತ್ನಮ್ಮ’ ರಂಗ ಕಾರ್ಯಾಗಾರದ ಶಿಬಿರಾರ್ಥಿಗಳು ಪ್ರದರ್ಶಿಸುತ್ತಿದ್ದರು.‌ ನಾಟಕದ ವೇಳೆ ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಲಾಗಿದೆ ಎಂದು ಆರೋಪಿಸಿ ಸಿದ್ದರಾಮಯ್ಯ ಅಭಿಮಾನಿಗಳು ಪ್ರತಿಭಟನೆ ನಡೆಸಿದ್ದರು.

ಈ ಬಗ್ಗೆ ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿ ಸುಬ್ರಹ್ಮಣ್ಯ ಅವರು ನಿರ್ದೇಶಕರ ನಡೆಯ ಬಗ್ಗೆ ಅಸಮಧಾನ ವ್ಯಕ್ತಪಡಿಸಿದರಲ್ಲದೇ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದಾರೆ. ಜಯಲಕ್ಷ್ಮೀಪುರಂ ಠಾಣೆ ಪೊಲೀಸರು ದೂರು ಸ್ವೀಕರಿಸಿದ್ದಾರೆ.

ಓದಿ:ಕೇಂದ್ರ ಸರ್ಕಾರದ ನೋಟು ಬ್ಯಾನ್‌ ನಿರ್ಧಾರ ಸರಿ ಎಂದ ಸುಪ್ರೀಂ ಕೋರ್ಟ್

ABOUT THE AUTHOR

...view details