ಕರ್ನಾಟಕ

karnataka

ETV Bharat / state

ಈಶ್ವರಪ್ಪರನ್ನು ಸಚಿವ ಸ್ಥಾನದಿಂದ ಉಚ್ಛಾಟನೆ ಮಾಡಲಿ: ಧ್ರುವನಾರಾಯಣ - ನಳಿನ್ ಕುಮಾರ್ ಕಟೀಲ್

ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌.ಈಶ್ವರಪ್ಪ ಅವರನ್ನು ಸಚಿವ ಸ್ಥಾನದಿಂದ ಉಚ್ಛಾಟನೆ ಮಾಡಬೇಕು ಎಂದು ಮಾಜಿ‌ ಸಂಸದ ಆರ್.ಧ್ರುವನಾರಾಯಣ ಆಗ್ರಹಿಸಿದ್ದಾರೆ.

ಮಾಜಿ‌ ಸಂಸದ ಆರ್.ಧ್ರುವನಾರಾಯಣ

By

Published : Sep 18, 2019, 4:51 PM IST

ಮೈಸೂರು:ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌.ಈಶ್ವರಪ್ಪ ಅವರನ್ನು ಸಚಿವ ಸ್ಥಾನದಿಂದ ಉಚ್ಛಾಟನೆ ಮಾಡಬೇಕು ಎಂದು ಮಾಜಿ‌ ಸಂಸದ ಆರ್.ಧ್ರುವನಾರಾಯಣ ಆಗ್ರಹಿಸಿದ್ದಾರೆ.

ಮೈಸೂರಿನ ಜಲದರ್ಶಿನಿ ಸರ್ಕಾರಿ ಅತಿಥಿ ಗೃಹದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಈಶ್ವರಪ್ಪ ಅವರು ಮಾತನಾಡುವ ಭರದಲ್ಲಿ ಸಿದ್ದರಾಮಯ್ಯ ಅವರನ್ನು ದಡ್ಡ-ವಡ್ಡ, ಮುಸ್ಮಿಂ‌ ಮತಗಳನ್ನು ಪಡೆದು ಗೆದ್ದವರು ಎಂದು ಕರೆದಿದ್ದಾರೆ.‌ ವಡ್ಡ ಜಾತಿ ಹೆಸರೇಳಿ ಜಾತಿ ನಿಂದನೆ ಮಾಡಿದ್ದಾರೆ. ಮುಸ್ಲಿಂಮರ ಮನೆಯಲ್ಲಿ ಊಟ ಮಾಡಿ ಅವರಿಗೆ ಅವಮಾನಿಸಿದ್ದಾರೆ ಎಂದು ಕಿಡಿಕಾರಿದರು.

ಈಶ್ವರಪ್ಪ ಅವರು ಬಹಿರಂಗವಾಗಿ ಕ್ಷಮೆಯಾಚನೆ ಮಾಡಬೇಕು. ಇಲ್ಲವಾದರೆ ಉಗ್ರ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಸಿದರು.ಚಿತ್ರದುರ್ಗದ ಸಂಸದ ನಾರಾಯಣಸ್ವಾಮಿ ಅವರು ಗೊಲ್ಲರಹಟ್ಟಿಗೆ ಹೋದಾಗ ಅವರನ್ನು ಜಾತಿ ಹೆಸರಿನಲ್ಲಿ ತಡೆದಾಗ, ಯಾಕೆ ಆರ್​ಎಸ್​​ಎಸ್ ಹಾಗೂ ಬಿಜೆಪಿ ಮೌನ ವಹಿಸಿತು.‌ ಕ್ರೈಸ್ತ ಮತಾಂತರವಾಗುತ್ತಿದೆ ಎಂಬ ಮಾಹಿತಿ ತಿಳಿದ ಕೂಡಲೇ ಗಲಾಟೆ ಮಾಡುವ ಮುಖಾಂಡರು ಈಗ ಎಲ್ಲಿ ಅಡಗಿ ಕುಳಿತ್ತಿದ್ದಾರೆ ಎಂದು ಪ್ರಶ್ನಿಸಿದರು.

ಕಾಂಗ್ರೆಸ್ ಹೆಚ್ಚಿನ ದೇಣಿಗೆ ಸಂಗ್ರಹಿಸುತ್ತಿದೆ ಎಂದು ಸುಳ್ಳು ಸುದ್ದಿಯನ್ನು ಹಬ್ಬಿಸುತ್ತಿದ್ದಾರೆ. ಬಿಜೆಪಿ ಹಾಗೂ ಕಾಂಗ್ರೆಸ್ ದೇಣಿಗೆ ಪಟ್ಟಿಗಳನ್ನು ಸಾರ್ವಜನಿಕವಾಗಿ ಬಹಿರಂಗ ಪಡಿಸಲಿ ಎಂದು ಸವಾಲು ಹಾಕಿದರು.

ABOUT THE AUTHOR

...view details