ಕರ್ನಾಟಕ

karnataka

ETV Bharat / state

ಬಿಜೆಪಿ ಪಕ್ಷದಲ್ಲಿನ ಗೊಂದಲಗಳ ಕುರಿತು ಸಂಸದ ಶ್ರೀನಿವಾಸ್​ ಪ್ರಸಾದ್​​​​ ಹೇಳಿದ್ದೇನು? - Distractions in BJP

ರಾಜ್ಯ ರಾಜಕಾರಣದಲ್ಲಿ ಹೊಸ ತಿರುವು ಪಡೆದುಕೊಂಡಿರುವ ಆಡಳಿತಾರೂಢ ಬಿಜೆಪಿ ಪಕ್ಷದಲ್ಲಿ ಎದ್ದಿರುವ ಗೊಂದಲಗಳ ಕುರಿತು ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಮಾತನಾಡಿದ್ದಾರೆ.

BJP MP Srinivasa Prasad,ಸಂಸದ ವಿ.ಶ್ರೀನಿವಾಸ್ ಪ್ರಸಾದ್

By

Published : Nov 14, 2019, 5:28 PM IST

ಮೈಸೂರು: ಅನರ್ಹರ ಆಗಮನದಿಂದ ಆಡಳಿತಾರೂಢ ಬಿಜೆಪಿಯಲ್ಲಿ ಗೊಂದಲಗಳು ಸೃಷ್ಟಿಯಾಗಿದ್ದು ನಿಜ. ಆದರೆ, ಅವುಗಳನ್ನು ಖಂಡಿತ ಬಗೆಹರಿಸಿಕೊಳ್ಳುತ್ತೇವೆ ಎಂದು ಸಂಸದ ವಿ.ಶ್ರೀನಿವಾಸ್ ಪ್ರಸಾದ್​​ ಹೇಳಿದ್ದಾರೆ.

ನಗರದ ರೈಲ್ವೆ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಪ್ರೀಂಕೋರ್ಟ್​ ತೀರ್ಪಿನ ನಂತರ ಎಲ್ಲರೂ ಬಿಜೆಪಿ ಪಕ್ಷ ಸೇರಿದ್ದಾರೆ. ಉಪ ಚುನಾವಣೆಗೆ ನಾಮಪತ್ರವನ್ನು ಇನ್ನೆರಡು ದಿನಗಳಲ್ಲಿ ಸಲ್ಲಿಸಲಿದ್ದಾರೆ. ಉಪ ಚುನಾವಣೆ ಸಂಬಂಧ 3 ಪಕ್ಷಗಳಲ್ಲಿ ಗೊಂದಲಗಳಿರುವುದು ನಿಜ. ಬಿಜೆಪಿಯಲ್ಲಿ ಹೊಸಕೋಟೆ ಕ್ಷೇತ್ರದ ಬಗ್ಗೆ ಗೊಂದಲವಿದೆ. ಅದನ್ನು ಪಕ್ಷ ಸರಿ ಮಾಡುತ್ತದೆ ಎಂದು ಸ್ಪಷ್ಟಪಡಿಸಿದರು.

ಸಂಸದ ವಿ.ಶ್ರೀನಿವಾಸ್ ಪ್ರಸಾದ್

ಮಾಜಿ ಸಿಎಂ ಕುಮಾರಸ್ವಾಮಿ ಅವರು ಬಹಿರಂಗವಾಗಿಯೇ ಶರತ್​ ಬಚ್ಚೇಗೌಡ ಅವರಿಗೆ ಬೆಂಬಲ ಕೊಡುತ್ತೇವೆ ಎಂದು ಹೇಳಿದ್ದಾರೆ. ಆದರೆ, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಶರತ್ ಬಚ್ಚೇಗೌಡ ಸೋಲುವುದಕ್ಕೆ ಕುಮಾರಸ್ವಾಮಿ ಅವರೇ ಕಾರಣ ಅನ್ನುವುದನ್ನು ಇಲ್ಲಿ ಮರೆಯಬಾರದು. ಈ ತರಹದ ರಾಜಕೀಯ ಏನು ಎಂಬುದು ಗೊತ್ತಾಗುವುದಿಲ್ಲ. ಜನ ಇದನ್ನೆಲ್ಲಾ ಗಮನಿಸುತ್ತಿದ್ದಾರೆ ಎಂದರು.

ಮಾಜಿ ಸಚಿವ ರೋಷನ್ ಬೇಗ್​​ ಹಾಗೂ ಅವರ ಮಗ ಬಿಜೆಪಿ ಸೇರ್ಪಡೆ ಬಗ್ಗೆ ಮಾತುಕತೆ ನಡೆಯುತ್ತಿದೆ. ಮಾತುಕತೆ ಬಳಿಕ ಪಕ್ಷಕ್ಕೆ ಸೇರಿಸಿಕೊಳ್ಳುವ ಬಗ್ಗೆ ತೀರ್ಮಾನವಾಗುತ್ತದೆ ಎಂದರು.

ABOUT THE AUTHOR

...view details