ಮೈಸೂರು: ವಿಧಾನ ಪರಿಷತ್ ಚುನಾವಣೆಯ ಮೈಸೂರು - ಚಾಮರಾಜನಗರ ದ್ವಿಸದಸ್ಯ ಕ್ಷೇತ್ರದಲ್ಲಿ ಎರಡನೇ ಪ್ರಾಶಸ್ತ್ಯದ ಮತದಲ್ಲಿ ಜೆಡಿಎಸ್ ಅಭ್ಯರ್ಥಿ ಸಿ.ಎನ್.ಮಂಜೇಗೌಡ ಪ್ರಯಾಸದ ಹಾಗೂ ಅಚ್ಚರಿಯ ಗೆಲುವು ಪಡೆದಿದ್ದಾರೆ.
ಎರಡನೇ ಪ್ರಾಶಸ್ತ್ಯ ಮತ ಎಣಿಕೆಯ ಆರಂಭದಲ್ಲಿ ಬಿಜೆಪಿಯ ಅಭ್ಯರ್ಥಿ ರಘು ಕೌಟಿಲ್ಯ ಮುನ್ನಡೆ ಸಾಧಿಸಿದ್ದು, ಜೆಡಿಎಸ್ ನ ಸಿ.ಎನ್.ಮಂಜೇಗೌಡ ನಡುವೆ ತೀವ್ರ ಪೈಪೋಟಿ ಎದುರಾಗಿತ್ತು.
ಮೈಸೂರಲ್ಲಿ ಜೆಡಿಎಸ್ಗೆ ಪ್ರಯಾಸದ, ಅಚ್ಚರಿಯ ಗೆಲುವು ಇದನ್ನೂ ಓದಿ: ಪರಿಷತ್ ಚುನಾವಣೆ: ಗೆದ್ದ ಅಭ್ಯರ್ಥಿಗಳು ಯಾರ‌್ಯಾರು? ಇಲ್ಲಿದೆ ಫುಲ್ ಡೀಟೇಲ್ಸ್!
ಅಂತಿಮವಾಗಿ ಎರಡನೇ ಪ್ರಾಶಸ್ತ್ಯದ ಮತಗಳಲ್ಲಿ ಸಿ.ಎನ್.ಮಂಜೇಗೌಡರು ಗೆಲುವು ಸಾಧಿಸಿದ್ದು, ಆರಂಭದಿಂದ ಮುನ್ನಡೆ ಸಾಧಿಸಿದ್ದ ಬಿಜೆಪಿಯ ಅಭ್ಯರ್ಥಿ ರಘು ಕೌಟಿಲ್ಯ ಕೊನೆಯ ಹಂತದಲ್ಲಿ ಸೋಲು ಅನುಭವಿಸಿದ್ದಾರೆ. ಎರಡನೇ ಪ್ರಾಶಸ್ತ್ಯದ ಎಷ್ಟು ಮತಗಳು ಚಲಾವಣೆಯಾಗಿವೆ, ಯಾರು ಎಷ್ಟು ಮತಗಳನ್ನು ಪಡೆದುಕೊಂಡಿದ್ದಾರೆ ಎಂಬ ಸಂಪೂರ್ಣ ಮಾಹಿತಿಯನ್ನು ಮುಂದೆ ಘೋಷಿಸಬೇಕಾಗಿದೆ.