ಮೈಸೂರು: ಖಾಸಗಿ ಹೋಟೆಲ್ ನ ಸಭಾಂಗಣದಲ್ಲಿ ಜೆಡಿಎಸ್ ಚಿಂತನ-ಮಂಥನ ಸಭೆ ನಡೆಸುತ್ತಿದೆ. ಈ ಸಭೆಗೆ ಶಾಸಕರು, ನಗರ ಪಾಲಿಕೆ ಸದಸ್ಯರು, ಜಿಲ್ಲಾ ಪಂಚಾಯತ್ ಸದಸ್ಯರು ಹಾಗೂ ತಾಲ್ಲೂಕು ಪಂಚಾಯತ್ ಸದಸ್ಯರು, ಪಕ್ಷದ ಮುಖಂಡರು ಭಾಗವಹಿಸಲಿದ್ದಾರೆ.
ಈ ಸಭೆಯಲ್ಲಿ ಜೆಡಿಎಸ್ ಪಕ್ಷದಿಂದ ತಟಸ್ಥರಾಗಿರುವ ಮಾಜಿ ಸಚಿವ ಹಾಗೂ ಹಾಲಿ ಜೆಡಿಎಸ್ ಶಾಸಕ ಜಿ.ಟಿ. ದೇವೇಗೌಡ ಭಾಗವಹಿಸುವುದು ಅನುಮಾನ ಎನ್ನಲಾಗ್ತಿದೆ.