ಕರ್ನಾಟಕ

karnataka

By

Published : Jan 18, 2020, 10:55 AM IST

ETV Bharat / state

ಪಾಲಿಕೆಯ ಮೇಯರ್ - ಉಪ ಮೇಯರ್ ಚುನಾವಣೆ:   ಜೆಡಿಎಸ್​ - ಕಾಂಗ್ರೆಸ್ ನಿಂದ ನಾಮಪತ್ರ ಸಲ್ಲಿಕೆ

ಮೈಸೂರು ಮಹಾನಗರ ಪಾಲಿಕೆಯ ಮೇಯರ್ ಹಾಗೂ ಉಪ ಮೇಯರ್ ಚುನಾವಣೆಯಲ್ಲಿ ಮುಂದುವರೆದ ಜೆಡಿಎಸ್ ಹಾಗೂ ಕಾಂಗ್ರೆಸ್ ಮೈತ್ರಿ.

Mayor-Deputy Mural Election in Mysore
ಪಾಲಿಕೆಯ ಮೇಯರ್-ಉಪ ಮೇಯರ್ ಚುನಾವಣೆಗೆ ನಾಮಪತ್ರ ಸಲ್ಲಿಸಿದ ಜೆಡಿಎಸ್​-ಕಾಂಗ್ರೆಸ್ ಅಭ್ಯರ್ಥಿಗಳು

ಮೈಸೂರು:ಮೈಸೂರು ಮಹಾನಗರ ಪಾಲಿಕೆಯ ಮೇಯರ್ ಹಾಗೂ ಉಪ ಮೇಯರ್ ಚುನಾವಣೆಗೆ ಜೆಡಿಎಸ್ ಹಾಗೂ ಕಾಂಗ್ರೆಸ್ ನಡುವೆ ಮೈತ್ರಿ ಮುಂದುವರೆದಿದೆ.

ಪಾಲಿಕೆಯ ಮೇಯರ್-ಉಪ ಮೇಯರ್ ಚುನಾವಣೆಗೆ ನಾಮಪತ್ರ ಸಲ್ಲಿಸಿದ ಜೆಡಿಎಸ್​-ಕಾಂಗ್ರೆಸ್ ಅಭ್ಯರ್ಥಿಗಳು

ಮೇಯರ್ ಸ್ಥಾನಕ್ಕೆ ಜೆಡಿಎಸ್​ನ ತಸ್ಲಿಮಾ ನಾಮಪತ್ರ ಸಲ್ಲಿಸಿದ್ದು, ಕಾಂಗ್ರೆನ್​ನ ಶ್ರೀಧರ್ ಉಪ ಮೇಯರ್ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದಾರೆ. ನಿನ್ನೆ ರಾತ್ರಿ ಕೆಪಿಸಿಸಿ ವೀಕ್ಷಕರಾದ ಕೃಷ್ಣಭೈರೇಗೌಡ, ಶಾಸಕ ಜಿ.ಟಿ.ದೇವೇಗೌಡ ಹಾಗೂ ಸಾ.ರಾ.ಮಹೇಶ್ ನಡುವೆ ನಡೆದ ಮೈತ್ರಿ ಮಾತುಕತೆ ಯಶಸ್ವಿಯಾಗಿದ್ದು, ಈ ಬಾರಿಯೂ ಸಹ ಪಾಲಿಕೆಯಲ್ಲಿ ಮೈತ್ರಿ ಮುಂದುವರೆಯಲಿದೆ.

ಇಂದು ನಡೆಯಲಿರುವ ಪಾಲಿಕೆಯ ಚುನಾವಣೆಯಲ್ಲಿ 65 ವಾರ್ಡ್​ಗಳಲ್ಲಿ ಪಾಲಿಕೆ ಸದಸ್ಯರಿದ್ದು, ಅದರಲ್ಲಿ ಬಿಜೆಪಿ 21, ಕಾಂಗ್ರೆಸ್ 19, ಜೆಡಿಎಸ್ 18, ಬಿಎಸ್ಪಿ 1 ಪಕ್ಷೇತರರು 5 ಜನರಿದ್ದಾರೆ. ಜೊತೆಗೆ ಜೊತೆಗೆ ಜೆಡಿಎಸ್ ಮತ್ತು ಕಾಂಗ್ರೆಸ್​ನ ನಾಲ್ವರು ಶಾಸಕರು, ನಾಲ್ವರು ವಿಧಾನಪರಿಷತ್ ಸದಸ್ಯರು ಹಾಗೂ ಬಿಜೆಪಿಯ ಒಬ್ಬ ಸಂಸದರು ಸೇರಿ 73 ಮಂದಿ ಇಂದಿನ ಪಾಲಿಕೆಯ ಮೇಯರ್ ಚುನಾವಣೆಯಲ್ಲಿ ಮತದಾನದಲ್ಲಿ ಭಾಗವಹಿಸಲಿದ್ದಾರೆ.

ABOUT THE AUTHOR

...view details