ಮೈಸೂರು :ನಮ್ಮ ಕುಟುಂಬದವರು ಎಂಎಲ್ಸಿ ಚುನಾವಣೆಯಲ್ಲಿ ಸ್ಪರ್ಧಿಸುವ ಪ್ರಶ್ನೆಯೇ ಇಲ್ಲ ಎಂದು ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಸ್ಪಷ್ಟಪಡಿಸಿದ್ದಾರೆ. ಈ ಮೂಲಕ ಜೆಡಿಎಸ್ನ ಶಾಸಕ ಸಾ.ರಾ.ಮಹೇಶ್ ನೀಡಿದ್ದ ಆಫರ್ ಅನ್ನು ಶಾಸಕ ಜಿ.ಟಿ.ದೇವೇಗೌಡ ತಿರಸ್ಕರಿಸಿದ್ದಾರೆ.
ಇಂದು ಚಾಮುಂಡಿ ಬೆಟ್ಟದ ನಂದಿ ಮಾರ್ಗದಲ್ಲಿ ರಸ್ತೆ ಕುಸಿತ ಸ್ಥಳಕ್ಕೆ ಸಚಿವ ಸಿ ಸಿ ಪಾಟೀಲ್ ಜೊತೆ ಆಗಮಿಸಿ ನಂತರ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಚಾಮುಂಡಿ ಬೆಟ್ಟದ ಸುರಕ್ಷತೆಗೆ ಏನೇನು ಕ್ರಮಕೈಗೊಳ್ಳಬೇಕು ಎಂಬ ಬಗ್ಗೆ ಉಸ್ತುವಾರಿ ಸಚಿವರು, ಲೋಕೋಪಯೋಗಿ ಸಚಿವರು ಹಾಗೂ ಮುಖ್ಯಮಂತ್ರಿಗಳ ಜೊತೆ ಸಭೆ ನಡೆಸಿ, ಚಾಮುಂಡಿ ಬೆಟ್ಟದ ಸಂರಕ್ಷಣೆಗೆ ಏನು ಮಾಡಬೇಕೆಂದು ತೀರ್ಮಾನ ಕೈಗೊಳ್ಳುತ್ತೇವೆ ಎಂದು ತಿಳಿಸಿದರು.
ಬೆಳಗ್ಗೆ ಪತ್ರಿಕಾಗೋಷ್ಠಿಯಲ್ಲಿ ಶಾಸಕ ಸಾ.ರಾ.ಮಹೇಶ್, ಜಿ.ಟಿ.ದೇವೇಗೌಡರ ನೇತೃತ್ವದಲ್ಲಿ ಪರಿಷತ್ ಚುನಾವಣೆ ಎದುರಿಸುತ್ತೇವೆ. ಅವರ ಮನೆಯವರೇ ಪಕ್ಷದ ಅಭ್ಯರ್ಥಿಯಾಗುತ್ತಾರೆ ಎಂಬ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಜಿ.ಟಿ.ಡಿ, ಯಾವ ಕಾರಣಕ್ಕೂ ವಿಧಾನ ಪರಿಷತ್‌ಗೆ ನಮ್ಮ ಕುಟುಂಬದವರು ಅಭ್ಯರ್ಥಿ ಆಗುವುದಿಲ್ಲ ಎಂದು ಸ್ಪಷ್ಟಪಡಿಸಿದ ಅವರು, ಚಾಮುಂಡೇಶ್ವರಿ ಕ್ಷೇತ್ರದ ಚಾರ್ಜ್ ಅನ್ನು ಸಾ.ರಾ.ಮಹೇಶ್ ತೆಗೆದುಕೊಂಡಿದ್ದಾರೆ.