ಕರ್ನಾಟಕ

karnataka

ETV Bharat / state

ಮೈಸೂರು: ವೈದ್ಯರ ಮೇಲೆ ಹಲ್ಲೆ ಖಂಡಿಸಿ ಕಿರಿಯ ವೈದ್ಯರ ಪ್ರತಿಭಟನೆ - minto eye hospital

ಭಾರತೀಯ ವೈದ್ಯಕೀಯ ಸಂಘ ಕರೆ ನೀಡಿರುವ ಪ್ರತಿಭಟನೆಗೆ ಮೈಸೂರು ಘಟಕದಿಂದ ಉತ್ತಮ ಪ್ರತಿಕ್ರಿಯೆ ದೊರಕಿದೆ. ಕೆ.ಆರ್.ಆಸ್ಪತ್ರೆ ಮುಂಭಾಗ ಜಮಾಯಿಸಿದ ಕಿರಿಯ ವೈದ್ಯರು, ಸರ್ಕಾರ ಸೂಕ್ತ ರಕ್ಷಣೆ ನೀಡಬೇಕು ಎಂದು ಆಗ್ರಹಿಸಿದರು.

mys

By

Published : Nov 8, 2019, 1:40 PM IST

ಮೈಸೂರು: ಮಿಂಟೋ ಕಣ್ಣಾಸ್ಪತ್ರೆ ಕಿರಿಯ ವೈದ್ಯರ ಮೇಲೆ ಹಲ್ಲೆ ಖಂಡಿಸಿ, ಭಾರತೀಯ ವೈದ್ಯಕೀಯ ಸಂಘ ಕರೆ ನೀಡಿರುವ ಪ್ರತಿಭಟನೆಗೆ ಮೈಸೂರು ಘಟಕದಿಂದ ಉತ್ತಮ ಪ್ರತಿಕ್ರಿಯೆ ದೊರಕಿದ್ದು,ಮೈಸೂರಿನ ಕೆ.ಆರ್.ಆಸ್ಪತ್ರೆಯ ಕಿರಿಯ ವೈದ್ಯರು ಪ್ರತಿಭಟನೆ ನಡೆಸಿದರು.

ಕೆ.ಆರ್.ಆಸ್ಪತ್ರೆ ಮುಂಭಾಗ ಜಮಾಯಿಸಿದ ಕಿರಿಯ ವೈದ್ಯರು, ಕೆಲವರು ವೈದ್ಯರ ಮೇಲೆ ಹಲ್ಲೆ ಬೆದರಿಕೆಯೊಡ್ಡುತ್ತಿದ್ದಾರೆ. ಇದರಿಂದ ಸೇವೆ ಮಾಡಲು ವೈದ್ಯರು ಹೆದರುತ್ತಿದ್ದಾರೆ. ವೈದ್ಯರಿಗೆ ಸರ್ಕಾರ ಸೂಕ್ತ ರಕ್ಷಣೆ ನೀಡಬೇಕು ಎಂದು ಆಗ್ರಹಿಸಿದರು.

ಕಿರಿಯ ವೈದ್ಯರ ಪ್ರತಿಭಟನೆ

ಮೈಸೂರಿನ ಖಾಸಗಿ ಆಸ್ಪತ್ರೆಗಳು ಒಪಿಡಿ ಬಂದ್ ಮಾಡಿದ್ದರಿಂದ ಕೆ.ಆರ್.ಆಸ್ಪತ್ರೆ ಹಾಗೂ ಸರ್ಕಾರಿ ಆಸ್ಪತ್ರೆಯ ಹಿರಿಯ ವೈದ್ಯರಿಗೆ ರಜೆ ರದ್ದುಗೊಳಿಸಿ ಕರ್ತವ್ಯಕ್ಕೆ ಹಾಜರಾಗುವಂತೆ ಸೂಚನೆ ನೀಡಿದರ ಮೇರೆಗೆ ಹಿರಿಯ ವೈದ್ಯರು ಕರ್ತವ್ಯಕ್ಯೆ ಹಾಜರಾಗಿದ್ದರು. ಮೈಸೂರು ವೈದ್ಯಕೀಯ ಹಾಗೂ ಸಂಶೋಧನಾ ಕಾಲೇಜಿನ ಡೀನ್ ಡಾ.ನಂಜರಾಜ ಅವರು 'ಈಟಿವಿ ಭಾರತ್' ನೊಂದಿಗೆ ಮಾತನಾಡಿ, ವೈದ್ಯರಿಗೆ ಸೂಕ್ತ ರಕ್ಷಣೆ ಒದಗಿಸಿ, ಹಲ್ಲೆ ಪ್ರಕರಣಗಳು ಜರುಗದಂತೆ ಎಚ್ಚರಿಕೆ ವಹಿಸಬೇಕು ಎಂದರು.

ABOUT THE AUTHOR

...view details