ಮೈಸೂರು: ಆದಿಚುಂಚನಗಿರಿ ಸಂಸ್ಥಾನದ ಕೆ.ಆರ್.ನಗರ ಶಾಖಾ ಮಠದ ಶಿವಾನಂದ ಸ್ವಾಮೀಜಿ (63) ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದಾರೆ.
ಕೆ.ಆರ್.ನಗರ ಚುಂಚನಕಟ್ಟೆ ಬಳಿ ಇರುವ ಆದಿಚುಂಚನಗಿರಿ ಶಾಖಾ ಮಠದ ಶಿವಾನಂದ ಸ್ವಾಮೀಜಿ ಅವರಿಗೆ ವಾರದ ಹಿಂದೆ ಸೋಂಕು ಕಾಣಿಸಿಕೊಂಡಿತ್ತು. ಬಳಿಕ ಅವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.