ಮೈಸೂರು:ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಸಹಾಯಕ ಕುಲಸಚಿವರು ಡೆತ್ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೈಸೂರಿನ ಚಾಮುಂಡಿಪುರಂ ನಿವಾಸಿ ಮಂಜುಪ್ರಸಾದ್ (55) ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದವರು.
ಬುಧವಾರ ಮಧ್ಯಾಹ್ನ 12ರ ಸಮಯದಲ್ಲಿ ಹೆಂಡತಿ ಮಕ್ಕಳು ಇಲ್ಲದ ವೇಳೆ ಮನೆಯಲ್ಲಿ ಡೆತ್ನೋಟ್ ಬರೆದು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಡೆತ್ನೋಟ್ನಲ್ಲಿ ಏನಿದೆ:
ರಿಯಾಜ್ ಮತ್ತು ಜಾವಿದ್ ಎಂಬುವರಿಂದ ನಾನು ಜಯಲಕ್ಷ್ಮೀಪುರಂನಲ್ಲಿ ನಿವೇಶನ ಖರೀದಿಸಿದ್ದೆ. ಬಳಿಕ ನಿವೇಶನವನ್ನು ಬೇರೆಯವರಿಗೆ ಮಾರಾಟ ಮಾಡಿದಾಗ, ಅವರಿಬ್ಬರು ನನಗೆ ನೀಡಿರುವ ದಾಖಲೆಗಳು ಸುಳ್ಳು ಎಂದು ತಿಳಿದು ಬಂದಿದೆ. ಅಲ್ಲದೇ, ಈ ಸಂಬಂಧ ದೂರು ಕೂಡ ದಾಖಲಾಗಿದೆ ಎಂದು ಡೆತ್ನೋಟ್ನಲ್ಲಿ ಬರೆದಿಟ್ಟಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಈ ಸಂಬಂಧ ನಗರದ ಕೆ.ಆರ್. ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ:ಫ್ಲ್ಯಾಟ್ ವಿಚಾರಕ್ಕಾಗಿ ಶಾಸಕ ಜಮೀರ್ - ನಿಖಿಲ್ ಬೆಂಬಲಿಗರ ನಡುವೆ ಗಲಾಟೆ