ಮೈಸೂರು:524 ಹೊಸ ಕೊರೊನಾ ವೈರಸ್ ಸೋಂಕಿನ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು,ಈ ಮೂಲಕ ಜಿಲ್ಲೆಯಲ್ಲಿ ಒಟ್ಟು ಕೊರೊನಾ ಪ್ರಕರಣಗಳ ಸಂಖ್ಯೆ 30,308 ಕ್ಕೇರಿದೆ.
ಮೈಸೂರು:ಇಂದು 524 ಹೊಸ ಕೊರೊನಾ ಪ್ರಕರಣಗಳು ಪತ್ತೆ,15 ಸಾವು - corona death cases from mysore
ಮೈಸೂರು ಜಿಲ್ಲೆಯಲ್ಲಿ ಇಂದು ಒಟ್ಟು 524 ಹೊಸ ಸೋಂಕಿತ ಪ್ರಕರಣಗಳು ದೃಢಪಟ್ಟಿದ್ದು, ಇಂದು 15 ಜನ ಸೋಂಕಿತರು ಮೃತಪಟ್ಟಿದ್ದಾರೆ. 633 ಜನ ಗುಣಮುಖರಾಗಿ ವಿವಿಧ ಆಸ್ಪತ್ರೆಗಳಿಂದ ತೆರಳಿದ್ದಾರೆ.
15 ಸಾವು
ಕೊರೊನಾ ಸೋಂಕಿನಿಂದ ಗುಣಮುಖರಾದ 633 ಮಂದಿ ವಿವಿಧ ಆಸ್ಪತ್ರೆಗಳಿಂದ ಡಿಸ್ಚಾಜ್೯ ಆಗಿದ್ದಾರೆ. ಇದುವರೆಗೂ ಜಿಲ್ಲೆಯ 25,115 ಜನ ಕೊರೊನಾ ಸೋಂಕಿತರು ಗುಣಮುಖರಾಗಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ 4,487 ಇದೆ.
ಇಂದು 15 ಮಂದಿ ಕೊರೊನಾ ಸೋಂಕಿತರು ಸಾವನ್ನಪ್ಪಿದ್ದು, ಮೈಸೂರಿನಲ್ಲಿ ಇದುವರೆಗೆ 706 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ.