ಮೈಸೂರು: ಪರಸ್ಪರ ಆರೋಪ ಮತ್ತು ಪ್ರತ್ಯಾರೋಪ ಮಾಡಿರುವ ಜಿಲ್ಲಾಧಿಕಾರಿ ಹಾಗೂ ಪಾಲಿಕೆ ಆಯುಕ್ತರ ವರ್ಗಾವಣೆಯ ಹಿಂದಿನ ಕಾರಣ ಏನು ಎಂಬ ಬಗ್ಗೆ ತನಿಖೆಯಾಗಬೇಕು ಎಂದು ಕೆಪಿಸಿಸಿ ಮಾಧ್ಯಮ ವಕ್ತಾರ ಎ. ಲಕ್ಷ್ಮಣ್ ಆಗ್ರಹಿಸಿದ್ದಾರೆ.
ಇಂದು ಈ ಟಿವಿ ಭಾರತ್ ಜೊತೆ ಮಾತನಾಡಿದ ಅವರು, ಮೈಸೂರು ಜಿಲ್ಲಾಧಿಕಾರಿಯಾಗಿದ್ದ ರೋಹಿಣಿ ಸಿಂಧೂರಿ ವಿರುದ್ದ ಪಾಲಿಕೆ ಆಯುಕ್ತೆಯಾಗಿದ್ದ ಶಿಲ್ಪಾನಾಗ್ ಅವರು ಆರೋಪ ಮಾಡಿ ರಾಜೀನಾಮೆ ನೀಡಿದ್ದರು. ಈ ಪ್ರಕರಣದ ಬಳಿಕ ಇಬ್ಬರು ಐ.ಎ.ಎಸ್ ಅಧಿಕಾರಿಗಳನ್ನು ನಿನ್ನೆ ರಾಜ್ಯ ಸರ್ಕಾರ ವರ್ಗಾವಣೆ ಮಾಡಿತ್ತು. ಈ ಹಿನ್ನೆಲೆ ಇಂದು ರೋಹಿಣಿ ಸಿಂಧೂರಿ ವರ್ಗಾವಣೆ ಹಿಂದೆ ಭೂ ಮಾಫಿಯಾ ಹಾಗೂ ಮೆಡಿಕಲ್ ಮಾಫಿಯಾ ಕೆಲಸ ಮಾಡಿದೆ ಎಂದು ಆರೋಪಿಸಿದರು.