ಮೈಸೂರು: ಕೊರೊನಾ ಕೇಂದ್ರಕ್ಕೆ ಉಪಕರಣಗಳ ಖರೀದಿಯಲ್ಲಿ ಭಾರಿ ಅವ್ಯವಹಾರ ನಡೆದಿದ್ದು, ಇದರಲ್ಲಿ ಸಿಎಂ ಕಾರ್ಯದರ್ಶಿ ಎಸ್ ವಿಶ್ವನಾಥ್ ಹಾಗೂ ಗೃಹಸಚಿವ ಬಸವರಾಜ ಬೊಮ್ಮಾಯಿ ಅವರ ಸಂಬಂಧಿಯೊಬ್ಬರು ಭಾಗಿಯಾಗಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಲಕ್ಷ್ಮಣ್ ಆರೋಪಿಸಿದ್ದಾರೆ.
ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿ ಮಾತನಾಡಿದ ಅವರು, ಕೋವಿಡ್ -19 ಉಪಕರಣಗಳ ಖರೀದಿಯಲ್ಲಿ ಗೃಹ ಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಂಬಂಧಿ ಹಾಗೂ ಬೆಂಗಳೂರಿನ ಕಿದ್ವಾಯಿ ಸಂಸ್ಥೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮಂಜುನಾಥ್ ಭಾಗಿಯಾಗಿದ್ದಾರೆ. ನೂರು ದಿನಗಳ ಬಾಡಿಗೆಗೆ ಹಾಸಿಗೆ, ದಿಂಬು, ಹೊದಿಕೆ ಕೊಳ್ಳಲು 240 ಕೋಟಿ ರೂ.ವೆಚ್ಚ ಮಾಡಲಾಗಿದೆ. ಈ ಗುತ್ತಿಗೆಯನ್ನು ಮಂತ್ರಿಗಳ ಸಂಬಂಧಿಗಳಿಗೆ ನೀಡಲಾಗಿದೆ ಎಂದು ಆರೋಪಿಸಿದ್ದಾರೆ.