ಕರ್ನಾಟಕ

karnataka

ETV Bharat / state

ಸಂಸದರ ನಿಧಿ ಹಣ ದುರ್ಬಳಕೆ ಆರೋಪ: ಪ್ರತಾಪ್ ಸಿಂಹ ವಿರುದ್ಧ ದೂರು ನೀಡಿದ ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ್ - complaint against Pratap Simha

ಸಂಸದ ಪ್ರತಾಪ್ ಸಿಂಹ ತಮ್ಮ ಸಂಸದರ ನಿಧಿಯ ಹಣವನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ್ ಆರೋಪಿಸಿದ್ದಾರೆ. ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ್ ದೂರು ನೀಡಿದ್ದಾರೆ.

KPCC spokesperson M Laxman filed a complaint
ಪ್ರತಾಪ್ ಸಿಂಹ ವಿರುದ್ಧ ದೂರು ನೀಡಿದ ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ್

By

Published : Nov 8, 2022, 6:29 PM IST

ಮೈಸೂರು: ಸಂಸದ ಪ್ರತಾಪ್ ಸಿಂಹ ತಮ್ಮ ಸಂಸದರ ನಿಧಿಯನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿ, ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ್ ದೂರು ನೀಡಿದ್ದಾರೆ.

ಇಂದು ಜಿಲ್ಲಾಧಿಕಾರಿ ಕಚೇರಿಗೆ ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ್ ಜಿಲ್ಲಾಧಿಕಾರಿಗಳಿಗೆ ಸಂಸದರ ವಿರುದ್ಧ ದೂರು ನೀಡಲು ಬಂದಿದ್ದರು. ಆದ್ರೆ ಅವರು ಬಂದಿದ್ದ ವೇಳೆ ಜಿಲ್ಲಾಧಿಕಾರಿಗಳು ಇಲ್ಲದ ಕಾರಣ ಅಪರ ಜಿಲ್ಲಾಧಿಕಾರಿಗಾಳಿಗೆ ದೂರನ್ನು ನೀಡಿದ್ದಾರೆ.

ದೂರಿನಲ್ಲಿ ಸಂಸದ ಪ್ರತಾಪ್ ಸಿಂಹ ತಮ್ಮ ಸಂಸದರ ನಿಧಿಯ ಹಣವನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ. ಅಲ್ಲದೇ ದಕ್ಷಿಣಕನ್ನಡ ಜಿಲ್ಲೆಯ ಕಕ್ಕಂಜೆ ಹಾಗೂ ಚಿಕ್ಕಮಗಳೂರಿನ ಮೂಡಿಗೆರೆಯಲ್ಲಿ ತಮ್ಮ ಹೆಂಡತಿ ಹೆಸರಿನ ಹೊಯ್ಸಳ ಕ್ಲಿನಿಕ್​ಗೆ ಸಂಸದರ ನಿಧಿಯಿಂದ ಆ್ಯಂಬುಲೆನ್ಸ್​ ನೀಡಿದ್ದಾರೆ ಎಂದು ಆರೋಪ ಮಾಡಿದ್ದಾರೆ. ಮೈಸೂರಿನ ವಿಳಾಸವಿಲ್ಲದ ಗೋಪಿನಾಥ್ ಚಾರಿಟೇಬಲ್ ಟ್ರಸ್ಟ್ ಗೆ 23 ಲಕ್ಷದ ಆಂಬ್ಯುಲೆನ್ಸ್​ ನೀಡಿದ್ದಾರೆ ಎನ್ನಲಾಗ್ತಿದೆ. ಇವರು ನೀಡಿರುವ ಚಾರಿಟೇಬಲ್ ಟ್ರಸ್ಟ್ ನ ಅಡ್ರೆಸ್​ನಲ್ಲಿ ಮ್ಯಾಕ್ ಡೊನಾಲ್ಡ್ ಹೋಟೆಲ್ ಕಾಣಿಸುತ್ತದೆ. ಇದೊಂದು ಸುಳ್ಳು ದಾಖಲಾತಿಯಾಗಿದ್ದು, ಸಂಸದ ಪ್ರತಾಪ್ ಸಿಂಹ ಸಂಸದರ ನಿಧಿಯಿಂದ ಬೇರೆ ಜಿಲ್ಲೆಗೆ 18 ಲಕ್ಷ ಅನುದಾನ ಹಾಗೂ ಅಡ್ರೆಸ್ ಇಲ್ಲದ ಮೈಸೂರಿನ ಚಾರಿಟೇಬಲ್ ಟ್ರಸ್ಟ್ ಗೆ 23 ಲಕ್ಷದ ಆಂಬ್ಯುಲೆನ್ಸ್​ ನೀಡಿದ್ದಾರೆ ಎಂದು ಹೇಳಿದ್ದಾರೆ.

ಪ್ರತಾಪ್ ಸಿಂಹ ವಿರುದ್ಧ ದೂರು ನೀಡಿದ ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ್

ಒಟ್ಟು 41 ಲಕ್ಷ ಹಣವನ್ನು ತಮ್ಮ ಸಂಸದರ ನಿಧಿಯಿಂದ ದುರ್ಬಳಕೆ ಮಾಡಿಕೊಂಡಿದ್ದಾರೆ. ಕೂಡಲೇ ಈ ಹಣವನ್ನು ವಾಪಸ್ ಪಡೆಯಬೇಕು. ಇಲ್ಲದಿದ್ದರೆ ಹೈಕೋರ್ಟ್​ನಲ್ಲಿ ದಾವೆ ಹೂಡುವುದಾಗಿ ತಮ್ಮ ದೂರಿನಲ್ಲಿ ಕೆಪಿಸಿಸಿ ವಕ್ತಾರ ಎಂ ಲಕ್ಷಣ್ ಎಚ್ಚರಿಕೆ ರವಾನಿಸಿದ್ದಾರೆ.

ಇದನ್ನೂ ಓದಿ:ರಮೇಶ್ ಜಾರಕಿಹೊಳಿ ವಿರುದ್ಧ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ದೂರು

ABOUT THE AUTHOR

...view details