ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಆಡಳಿತ ಮಂಡಳಿ ಯುಜಿಸಿ ವಿಧಿಸಿದ್ದ ಷರತ್ತುಗಳನ್ನು ಉಲ್ಲಂಘಿಸಿದೆ. ಪರಿಣಾಮ ಮುಂದಿನ ದಿನಗಳಲ್ಲಿ ಮುಕ್ತ ವಿವಿಯ ಮಾನ್ಯತೆ ಮತ್ತೊಮ್ಮೆ ರದ್ದಾಗುವ ಸಾಧ್ಯತೆಯಿದೆ ಎಂದು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ವೇದಿಕೆ ರಾಜ್ಯಾಧ್ಯಕ್ಷ ಕೆ.ಎಸ್.ಶಿವರಾಮ್ ಆರೋಪಿಸಿದ್ದಾರೆ.
ನಗರದ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದೆ ಕೂಡ ಯುಜಿಸಿ ನಿಯಮಗಳನ್ನು ಉಲ್ಲಂಘಿದ ಕಾರಣಕ್ಕೆ ಮುಕ್ತ ವಿವಿ ಮಾನ್ಯತೆ ರದ್ದಾಗಿತ್ತು. ಇದಾದ ಬಳಿಕ ಯುಜಿಸಿಯ ನಿಯಮಗಳನ್ನು ಉಲ್ಲಂಘನೆ ಮಾಡದಂತೆ ಆದೇಶಿಸಿ ಮಾನ್ಯತೆ ನೀಡಲಾಗಿದೆ ಎಂದರು.
ಆದರೆ, ಈಗಲೂ ಮುಕ್ತ ವಿ.ವಿ ಯುಜಿಸಿ ವಿಧಿಸಿದ್ದ ಷರತ್ತುಗಳನ್ನು ಗಾಳಿಗೆ ತೂರಿದೆ. ನಿಯಮಗಳಿಗೆ ವಿರುದ್ಧವಾಗಿ ಕೋರ್ಸ್‌ಗಳನ್ನು ನಡೆಸಲಾಗುತ್ತಿದೆ. ಮುಕ್ತ ವಿವಿಯಲ್ಲಿ ನಿಯಮ ಬಾಹಿರವಾಗಿ ಪದವಿಗಳನ್ನು ಹಂಚಿಕೆ ಮಾಡಲಾಗುತ್ತಿದೆ. ಇದು ರಾಷ್ಟ್ರಮಟ್ಟದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ ಆಗಿದೆ ಎಂದು ಹೇಳಿದರು.