ಮೈಸೂರು:ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಕೆಎಸ್ಆರ್ಟಿಸಿ ಬಸ್ನಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಹೆಚ್.ಡಿ.ಕೋಟೆ ತಾಲೂಕಿನಲ್ಲಿ ನಡೆದಿದೆ.
ಹಳ್ಳಕ್ಕೆ ಬಿದ್ದ ಕೆಎಸ್ಆರ್ಟಿಸಿ ಬಸ್: ಪ್ರಯಾಣಿಕರು ಪಾರು - ಸಾರಿಗೆ ಬಸ್
ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಕೆಎಸ್ಆರ್ಟಿಸಿ ಬಸ್ನಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಹೆಚ್.ಡಿ.ಕೋಟೆ ತಾಲೂಕಿನಲ್ಲಿ ನಡೆದಿದೆ.
ಹಳ್ಳಕ್ಕೆ ಬಿದ್ದ ಕೆಎಸ್ಆರ್ಟಿಸಿ
ಮೈಸೂರಿನಿಂದ ಹೆಚ್.ಡಿ.ಕೋಟೆ ತಾಲೂಕಿಗೆ ಹೋಗುತ್ತಿದ್ದ ಸಾರಿಗೆ ಬಸ್ ಕೋಡಿ ಅರಳಿಮರ ನಿಲ್ದಾಣದ ಬಳಿ ಅಗೆದ ಹಳ್ಳಕ್ಕೆ ಬಿದ್ದಿದೆ. ಇದರಿಂದ ಬಸ್ ಕಿಟಿಕಿ ಗಾಜನ್ನು ಒಡೆದ ಪ್ರಯಾಣಿಕರು ಹೊರಬಂದು ಕಾಪಾಡುವಂತೆ ಅರಚಿದ್ದಾರೆ. ಕೂಡಲೇ ಸಹಾಯಕ್ಕೆ ಧಾವಿಸಿದ ಸಾರ್ವಜನಿಕರು, ಪ್ರಯಾಣಿಕರನ್ನು ಬೇಗನೆ ಮೇಲಕ್ಕೆ ಎಳೆದುಕೊಂಡು ಪ್ರಾಣಾಪಾಯದಿಂದ ಪಾರು ಮಾಡಿದ್ದಾರೆ.
ಸಣ್ಣಪುಟ್ಟ ಗಾಯಗಳಾಗಿರುವ ಪ್ರಯಾಣಿಕರನ್ನು ಸ್ಥಳೀಯ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆದೊಯ್ಯಲಾಗಿದೆ. ಘಟನೆ ಕುರಿತು ಹೆಚ್.ಡಿ.ಕೋಟೆಯಲ್ಲಿ ಪ್ರಕರಣ ದಾಖಲಾಗಿದೆ.