ಮೈಸೂರು: ವಿವಿಧ ಬೇಡಿಕೆ ಈಡೇರಿಸುವಂತೆ ನಾಳೆ ಸಾರಿಗೆ ನೌಕರರು ಪ್ರತಿಭಟನೆ ನಡೆಸಲು ಮುಂದಾಗಿರುವ ಹಿನ್ನೆಲೆಯಲ್ಲಿ ಇಂದೇ ಪ್ರಯಾಣಿಕರು ಕೇಂದ್ರೀಯ ಬಸ್ ನಿಲ್ದಾಣದಿಂದ ದೂರ ಸರಿದಿದ್ದಾರೆ.
ಒಂದೆಡೆ ಕೊರೊನಾ ಎರಡನೇ ಅಲೆ ಭೀತಿ, ಮತ್ತೊಂದೆಡೆ ಸಾರಿಗೆ ಮುಷ್ಕರದ ಬಿಸಿಯಿಂದ ಕಂಗೆಟ್ಟ ಪ್ರಯಾಣಿಕರು ಪ್ರತಿಭಟನೆ ಆರಂಭಕ್ಕೂ ಮುನ್ನವೇ ಊರು ಸೇರುತ್ತಿದ್ದಾರೆ. ಪ್ರಯಾಣಿಕರಿಲ್ಲದೇ ಬಸ್ ನಿಲ್ದಾಣಗಳು ಬಿಕೋ ಎನ್ನುತ್ತಿವೆ.