ಮೈಸೂರು:ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿವಿಧ ಕ್ಷೇತ್ರಗಳಿಗೆ ಪ್ಯಾಕ್ಯೇಜ್ ಘೋಷಣೆ ಮಾಡಿ, ಸಹಕಾರ ಬ್ಯಾಂಕ್ಗಳ ಸಾಲ ಮರುಪಾವತಿ ಅವಧಿ ವಿಸ್ತರಣೆ ಮಾಡಿರುವುದು ಸ್ವಾಗತಾರ್ಹ ಎಂದು ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಹೇಳಿದ್ದಾರೆ.
ವಿಡಿಯೋ ಮೂಲಕ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಇಂದಿನ ಸಂಕಷ್ಟಕ್ಕೆ ಇದು ರೈತರಿಗೆ ಅಲ್ಪಮಟ್ಟದ ಸಹಾಯವಾಗಲಿದೆ. ಈ ಯೋಜನೆಯನ್ನ ಮತ್ತಷ್ಟು ವಿಸ್ತರಣೆ ಮಾಡಬೇಕು ಹಾಗೂ ಕೇಂದ್ರವೂ ಈ ನಿಟ್ಟಿನಲ್ಲಿ ಕ್ರಮ ವಹಿಸಬೇಕು. ರಾಷ್ಟ್ರೀಕೃತ ಬ್ಯಾಂಕ್ಗಳ ಸಾಲ ಮರುಪಾವತಿಯನ್ನು 3 ವರ್ಷಗಳ ಅವಧಿಗೆ ವಿಸ್ತರಿಸಬೇಕು ಎಂದಿದ್ದಾರೆ.