ಕರ್ನಾಟಕ

karnataka

ETV Bharat / state

ಕಂದಾಯ ಸಚಿವ ಅಶೋಕ್ ಒಬ್ಬ ಅವಿವೇಕಿ: ಕುರುಬೂರು ಶಾಂತಕುಮಾರ್ ವಾಗ್ದಾಳಿ - Kurubur Shanthakumar barrage against R Asok

ಭೂ ಸುಧಾರಣೆ ತಿದ್ದುಪಡಿ ಕಾಯ್ದೆಯಿಂದ ರೈತರಿಗೆ ಅನುಕೂಲವಾಗಲಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಸುಳ್ಳು ಹೇಳುತ್ತಿದ್ದಾರೆ ಎಂದು ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ವಾಗ್ದಾಳಿ ನಡೆಸಿದ್ದಾರೆ.

Kurubur Shanthakumar barrage against R Asok
ಕುರುಬೂರು ಶಾಂತಕುಮಾರ್ ವಾಗ್ದಾಳಿ

By

Published : Jun 22, 2020, 2:07 PM IST

ಮೈಸೂರು: ಭೂ ಸುಧಾರಣೆ ತಿದ್ದುಪಡಿ ಕಾಯ್ದೆಯಿಂದ ರೈತರಿಗೆ ಅನುಕೂಲವಾಗಲಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳುತ್ತಿದ್ದಾರೆ. ಯಾರಿಗೆ ಅನುಕೂಲವಾಗಿದೆ ಎಂಬುದನ್ನು ಸ್ಪಷ್ಟಪಡಿಸಲಿ, ಅವರೊಬ್ಬ ಅವಿವೇಕಿ ಸಚಿವ ಎಂದು ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ವಾಗ್ದಾಳಿ ನಡೆಸಿದ್ದಾರೆ.

ನಗರದ ಜಲದರ್ಶಿನಿ ಅತಿಥಿ ಗೃಹದಲ್ಲಿ ಮಾತನಾಡಿ, ರಾಜ್ಯದಲ್ಲಿ 2.40 ಲಕ್ಷ ಹೆಕ್ಟೇರ್​ ಭೂಮಿಯನ್ನ ಆರ್​ಟಿಸಿ ಇಲ್ಲದೇ ಮಾರಾಟ ಮಾಡಲಾಗಿದೆ ಎಂದು ಆರ್.ಅಶೋಕ್ ಹೇಳಿದ್ದಾರೆ. ಆದರೆ, ಆ ಭೂಮಿಯೇ ಅಥವಾ ಬರಡು ಭೂಮಿಯೇ ಎಂಬುವುದು ಜನರ ಮುಂದೆ ಸ್ಪಷ್ಟಪಡಿಸಲಿ. ದಿಕ್ಕು ತಪ್ಪಿಸಲು ಸುಳ್ಳು ಹೇಳಬಾರದು ಎಂದು ಕಿಡಿಕಾರಿದರು.

ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಭೂ ಸುಧಾರಣೆ ತಿದ್ದುಪಡಿ ಕಾಯ್ದೆ ತರಲು ಹೋದಾಗ, ಸಿಎಂ ಬಿ‌.ಎಸ್.ಯಡಿಯೂರಪ್ಪ ಹೋರಾಟ ಮಾಡಿದ್ದರು. ಆದರೆ, ಇವರ ಸರ್ಕಾರ ಮಾಡುತ್ತಿರುವುದೇನು ಎಂದು ಪ್ರಶ್ನಿಸಿದರು. ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ವಿರೋಧಿಸಿ ನಾಳೆಯಿಂದ ರಾಜ್ಯಾದ್ಯಂತ ಎಲ್ಲಾ ಜಿಲ್ಲಾ ಉಸ್ತುವಾರಿ ಸಚಿವರಿಗೆ ಘೇರಾವ್ ಚಳವಳಿ ನಡೆಸಲು ರೈತ ಸಂಘಟನೆಗಳು ನಿರ್ಧಾರ ಮಾಡಿವೆ. ಜೂನ್ 24 ರಂದು ರಾಜ್ಯದ ಎಲ್ಲ ಶಾಸಕರ ಮನೆ ಮುಂದೆ ಹಾಗೂ 29 ರಂದು ವಿಭಾಗಾಧಿಕಾರಿ ಕಚೇರಿ ಮುಂದೆ ಬಾರಕೊಲ್ ಚಳವಳಿ ನಡೆಸಲಾಗುವುದು. ಮುಂದಿನ ದಿನಗಳಲ್ಲಿ ಮುಖ್ಯಮಂತ್ರಿ ಮನೆಗೆ ಮುತ್ತಿಗೆ ಹಾಕಲಾಗುವುದು ಎಂದು ತಿಳಿಸಿದರು.

ABOUT THE AUTHOR

...view details