ಕರ್ನಾಟಕ

karnataka

ಕುವೆಂಪು ಅವರ ಮನೆ ಸ್ಮಾರಕ ಮಾಡ್ತಿವಿ: ಸಚಿವ ಸಿ‌.ಪಿ. ಯೋಗೇಶ್ವರ್

By

Published : Mar 28, 2021, 9:40 PM IST

Updated : Mar 28, 2021, 10:07 PM IST

ಮೈಸೂರಿನ ವಿ.ವಿ‌. ಪುರನಲ್ಲಿರುವ ಕುವೆಂಪು ಅವರ ಉದಯರವಿ ಮನೆಗೆ ಭಾನುವಾರ ಪ್ರವಾಸೋದ್ಯಮ ಸಚಿವ ಸಿ.ಪಿ. ಯೋಗೇಶ್ವರ್ ಭೇಟಿ ನೀಡಿದ್ದರು. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕುವೆಂಪು ಅವರ ನಿವಾಸವನ್ನು ಸ್ಮಾರಕವನ್ನಾಗಿಸಿ ಕುವೆಂಪುರವರ ವಿಶ್ವಮಾನವ ಸಂದೇಶವನ್ನು ಸಾರಲಾಗುವುದು ಎಂದರು.

Minister CP Yogeshwar
ಪ್ರವಾಸೋದ್ಯಮ ಸಚಿವ ಸಿ.ಪಿ. ಯೋಗೇಶ್ವರ್

ಮೈಸೂರು: ರಾಷ್ಟ್ರಕವಿ ಕುವೆಂಪು ಅವರ ಮೈಸೂರಿನ 'ಉದಯರವಿ' ಮನೆಯನ್ನು ಸ್ಮಾರಕವನ್ನಾಗಿಸಲು ರಾಜ್ಯ ಸರ್ಕಾರ ಮುಂದಾಗಿದೆ ಎಂದು ಪ್ರವಾಸೋದ್ಯಮ ಸಚಿವ ಸಿ.ಪಿ. ಯೋಗೇಶ್ವರ್ ಹೇಳಿದ್ದಾರೆ.

ನಗರದ ವಿ.ವಿ‌.ಪುರನಲ್ಲಿರುವ ಕುವೆಂಪು ಅವರ ಉದಯರವಿ ಮನೆಗೆ ಭೇಟಿ ನೀಡಿ ಕುವೆಂಪುರವರ ಕುಟುಂಬದವರೊಂದಿಗೆ ಚರ್ಚೆ ನಡೆಸಿ ನಂತರ ಅವರು ಈ ವಿಷಯ ತಿಳಿಸಿದರು.

ಪ್ರವಾಸೋದ್ಯಮ ಸಚಿವ ಸಿ.ಪಿ. ಯೋಗೇಶ್ವರ್

ವಿಶ್ವ ಮಾನವ ಸಂದೇಶ ನೀಡಿದ ವಿಶ್ವಕವಿ ನಾಡಿನ ಹೆಮ್ಮೆಯ ರಾಷ್ಟ್ರಕವಿಗಳಾದ ಕುವೆಂಪು ಅವರ ಸಾಹಿತ್ಯ ಮತ್ತು ಕಾವ್ಯಗಳು ಇಂದಿಗೂ ಅಜರಾಮರ. ಈ ನಿಟ್ಟಿನಲ್ಲಿ ದೇಶ-ವಿದೇಶಗಳಿಂದ ಪ್ರವಾಸಕ್ಕೆ ಬರುವ ಪ್ರವಾಸಿಗರಿಗೆ ಕುವೆಂಪು ಅವರ ನಿವಾಸವನ್ನು ಸ್ಮಾರಕವನ್ನಾಗಿಸಿ ಕುವೆಂಪುರವರ ವಿಶ್ವಮಾನವ ಸಂದೇಶವನ್ನು ಸಾರಲಾಗುವುದು. ಈಗಾಗಲೇ ಅವರ ಪುತ್ರಿ ಮತ್ತು ಕುಟುಂಬದವರೊಂದಿಗೆ ಒಂದು ಸುತ್ತಿನ ಮಾತುಕತೆ ನಡೆಸಲಾಗಿದೆ ಎಂದು ತಿಳಿಸಿದರು.

ಓದಿ:ಹುಣ್ಣಿಮೆ ಎಫೆಕ್ಟ್: ನಂಜುಂಡೇಶ್ವರನ ದರ್ಶನಕ್ಕೆ ಹರಿದುಬಂದ ಭಕ್ತ ಸಮೂಹ

ಮುಂದಿನ ಪೀಳಿಗೆಯವರಿಗೆ ಕುವೆಂಪು ಅವರ ಸಂದೇಶಗಳನ್ನು ತಿಳಿಸುವ ಕಾರ್ಯಕ್ಕೆ ನಮ್ಮ ಸರ್ಕಾರ ಮುಂದಾಗಿದ್ದೇವೆ. ರಾಜ್ಯಾದ್ಯಂತ ಎಲ್ಲ ಜಿಲ್ಲೆಗಳಲ್ಲಿ ಪ್ರವಾಸ ಮಾಡಿದ್ದೇನೆ. ಪ್ರತಿಯೊಂದು ಜಿಲ್ಲೆಗಳಲ್ಲಿ ಅದರದ್ದೇ ಆದ ಸಮಸ್ಯೆಗಳಿವೆ. ಅದನ್ನು ಶೀಘ್ರದಲ್ಲೇ ಮುಖ್ಯಮಂತ್ರಿಗಳೊಂದಿಗೆ ಚರ್ಚೆ ನಡೆಸಿ ಬಗೆಹರಿಸುತ್ತೇವೆ. ಎಲ್ಲಾ ಜಿಲ್ಲೆಗಳಲ್ಲಿ ಹೋಟೆಲ್ ಮಾಲೀಕರ ಸಂಘದವರೊಂದಿಗೆ ಚರ್ಚೆ ನಡೆಸಿ ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸಲು ಮುಂದಾಗಿದ್ದೇವೆ ಎಂದು ಸಚಿವರು ಮಾಹಿತಿ ನೀಡಿದರು.

Last Updated : Mar 28, 2021, 10:07 PM IST

ABOUT THE AUTHOR

...view details