ಮೈಸೂರು:ಕಾರ್ಖಾನೆಯಲ್ಲಿ ಕೆಲಸ ಮಾಡುವಾಗ ಮಹಡಿಯಿಂದ ಆಯತಪ್ಪಿ ಬಿದ್ದು ಕಾರ್ಮಿಕ ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲೂಕಿನ ತಾಂಡ್ಯ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ.
ಕಾರ್ಖಾನೆ ಮಹಡಿಯಿಂದ ಆಯತಪ್ಪಿ ಬಿದ್ದು ಕಾರ್ಮಿಕ ಸಾವು - ಮೈಸೂರು
ಕಾರ್ಖಾನೆಯ ಎರಡನೇ ಮಹಡಿಯಲ್ಲಿ ಕೆಲಸ ಮಾಡುತ್ತಿದ್ದಾಗ ಕಾರ್ಮಿಕ ಆಯತಪ್ಪಿ ಕೆಳಗೆ ಬಿದ್ದ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಕೆಂಪಸಿದ್ದನಹುಂಡಿ ಗ್ರಾಮದ ಸಿದ್ದರಾಜು
ತಾಂಡ್ಯ ಕೈಗಾರಿಕಾ ಪ್ರದೇಶದಲ್ಲಿರುವ ಐಟಿಸಿ ಕಾರ್ಖಾನೆಯಲ್ಲಿ ಘಟನೆ ನಡೆದಿದ್ದು, ಕೆಂಪಸಿದ್ದನಹುಂಡಿ ಗ್ರಾಮದ ಸಿದ್ದರಾಜು (35) ಎಂಬಾತ ಕಾರ್ಖಾನೆಯ 2ನೇ ಮಹಡಿಯಲ್ಲಿ ಕೆಲಸ ಮಾಡುತ್ತಿದ್ದ. ಈ ವೇಳೆ ಆಯ ತಪ್ಪಿ ಕೆಳಗೆ ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ನಂಜನಗೂಡು ಗ್ರಾಮಾಂತರ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತ ಕುಟುಂಬಕ್ಕೆ ಪರಿಹಾರ ನೀಡಬೇಕೆಂದು ಕಾರ್ಮಿಕ ಸಂಘಟನೆಗಳು ಆಗ್ರಹಿಸಿವೆ.