ಮೈಸೂರು:ಪ್ರವಾಸಿಗರನ್ನು ಸೆಳೆಯಲು ಸಾಂಸ್ಕೃತಿಕ ನಗರಿಯಲ್ಲಿ ಪ್ರವಾಸೋದ್ಯಮ ಇಲಾಖೆ ಅಂಬಾರಿ ಬಸ್ ಸೇವೆಯನ್ನು ಆರಂಭಿಸಲು ಸಿದ್ಧತೆ ನಡೆಸಿದ್ದು, ಬಸ್ನ ಟ್ರಯಲ್ ರನ್ ಇಂದು ನಡೆಯಿತು.
ಸಾಂಸ್ಕೃತಿಕ ನಗರಿಗೆ ಪ್ರತಿ ವರ್ಷ ಸುಮಾರು 30 ಲಕ್ಷಕ್ಕೂ ಅಧಿಕ ಪ್ರವಾಸಿಗರು ದೇಶ ವಿದೇಶಗಳಿಂದ ಆಗಮಿಸುತ್ತಾರೆ. ಆದರೆ ಕಳೆದ ವರ್ಷ ಕೋವಿಡ್ ಹಿನ್ನೆಲೆ ಪ್ರವಾಸೋದ್ಯಮ ಸಂಪೂರ್ಣ ಕುಸಿದಿತ್ತು. ಹೀಗಾಗಿ ಪ್ರವಾಸೋದ್ಯಮದ ಅಭಿವೃದ್ಧಿಗೆ ಪ್ರವಾಸೋದ್ಯಮ ಇಲಾಖೆ ಹೊಸ ಪ್ಲಾನ್ ಸಿದ್ದಪಡಿಸಿದ್ದು, ಅಂಬಾರಿ ಹೆಸರಿನ ಡಬಲ್ ಡೆಕ್ಕರ್ ಬಸ್ ಮೂಲಕ ಅರಮನೆ ನಗರಿಯ ಸೌಂದರ್ಯವನ್ನು ಪ್ರವಾಸಿಗರಿಗೆ ತೋರಿಸುವ ವ್ಯವಸ್ಥೆ ಮಾಡಲಾಗಿದೆ. ಅದಕ್ಕಾಗಿ ಇಂದು ಅಂಬಾರಿ ಬಸ್ನ ಟ್ರಯಲ್ ರನ್ ನಡೆಯಿತು.