ಮೈಸೂರು: ಇವಿಎಂ ತೊಲಗಿಸಿ, ಬ್ಯಾಲೆಟ್ ಬಳಸಿ, ಪ್ರಜಾಪ್ರಭುತ್ವ ಉಳಿಸಿ ಚಳವಳಿಯನ್ನು ರಾಜ್ಯ ಮಹಿಳಾ ಕಾಂಗ್ರೆಸ್ ಹಮ್ಮಿಕೊಂಡಿದೆ.
ಇವಿಎಂ ತೊಲಗಿಸಿ, ಬ್ಯಾಲೆಟ್ ಬಳಸಿ ಚಳವಳಿ.. 1 ಲಕ್ಷ ಜನರಿಂದ ಅಭಿಪ್ರಾಯ ಸಂಗ್ರಹ - undefined
ಇವಿಎಂ ತೊಲಗಿಸಿ, ಬ್ಯಾಲೆಟ್ ಬಳಸಿ, ಪ್ರಜಾಪ್ರಭುತ್ವ ಉಳಿಸಿ ಚಳವಳಿಯನ್ನು ರಾಜ್ಯ ಮಹಿಳಾ ಕಾಂಗ್ರೆಸ್ ಹಮ್ಮಿಕೊಂಡಿದೆ ಎಂದು ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪಲತಾ ಅಮರನಾಥ್ ತಿಳಿಸಿದರು.
ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪಲತಾ ಅಮರನಾಥ್, ಮೊದಲ ಹಂತವಾಗಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳ ಮಹಿಳಾ ಘಟಕಗಳು ಸಾರ್ವಜನಿಕರ ಬಳಿ ಹೋಗಿ ಚುನಾವಣೆಯಲ್ಲಿ ಇವಿಎಂ ಬಳಸಬೇಕು ಅಥವಾ ಬ್ಯಾಲೆಟ್ ಪೇಪರ್ ಬಳಸಬೇಕು ಎಂಬ ಬಗ್ಗೆ 1 ಲಕ್ಷ ಜನರಿಂದ ಪೋಸ್ಟ್ಕಾರ್ಡ್ ನಲ್ಲಿ ಅಭಿಪ್ರಾಯ ಸಂಗ್ರಹಿಸುತ್ತೇವೆ. ಈ ಪೋಸ್ಟ್ಕಾರ್ಡ್ಗಳನ್ನು ರಾಷ್ಟ್ರಪತಿಯವರಿಗೆ ಕಳಿಸಲಾಗುವುದು ಎಂದು ತಿಳಿಸಿದರು.
ಮುಂದುವರಿದ ಅಮೆರಿಕ, ಜಪಾನ್ ದೇಶಗಳಲ್ಲಿ ಬ್ಯಾಲೆಟ್ ಪೇಪರ್ ಬಳಸಲಾಗುತ್ತಿದೆ. ಆದರೆ, ಭಾರತದಲ್ಲಿ ಮಾತ್ರ ಇವಿಎಂ ಬಳಸಲಾಗುತ್ತಿದೆ. ಇದು ಪ್ರಜಾಪ್ರಭುತ್ವಕ್ಕೆ ಮಾರಕ ಆದ್ದರಿಂದ ಪ್ರಜಾಪ್ರಭುತ್ವದ ಉಳಿವಿಗಾಗಿ ರಾಜ್ಯಾದ್ಯಂತ ಈ ಮತಪತ್ರ ಚಳವಳಿಯನ್ನು ಆರಂಭಿಸಲಾಗಿದೆ ಎಂದು ಪುಷ್ಪಲತಾ ಅಮರನಾಥ್ ಹೇಳಿದರು.